ಮಧ್ಯಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ
ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ
ಜಬಲ್‌ಪುರ (ಮಧ್ಯಪ್ರದೇಶ): ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗೋಹಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ಲೈಫ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.
ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಬೆಂಕಿ ಹೊತ್ತಿಕೊಂಡಾಗ ಆಸ್ಪತ್ರೆಯಿಂದ ಹೊರ ಬರಲು ಒಂದೇ ದಾರಿಯಿದ್ದು, ಬೇರೆ ದಾರಿಯೇ ಇಲ್ಲದ ಕಾರಣ ಇಷ್ಟು ಮಂದಿ ಒಳಗೆ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
8 burnt to death in madhya pradesh hospital
Follow us On
Google News |