ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ! ಹೊಂಡಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು

Story Highlights

ಛತ್ತೀಸ್‌ಗಢದಲ್ಲಿ (Chhattisgarh) ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಎಂಟು ಮಂದಿ ಸಾವನ್ನಪ್ಪಿದ್ದಾರೆ

ಛತ್ತೀಸ್‌ಗಢದಲ್ಲಿ (Chhattisgarh) ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಬಲರಾಮಪುರ ಜಿಲ್ಲೆಯಲ್ಲಿ ಕಾರೊಂದು (Car) ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದೆ. ಈ ಘಟನೆಯಲ್ಲಿ ಎಂಟು ಜೀವಗಳು ಬಲಿಯಾದವು. ಶನಿವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದೆ. ಹಲವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಇನ್ನು ಕೆಲವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬುಧಾ ಬಗೀಚಾ ಮುಖ್ಯ ರಸ್ತೆಯ ತಿರುವಿನಲ್ಲಿ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿದೆ. ಈ ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಚಾಲಕನ ಜತೆಗೆ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಲಾರಿಮಾದಿಂದ ನೆರೆಯ ಸೂರಜ್‌ಪುರ ಜಿಲ್ಲೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ವಾಹನ ವೇಗವಾಗಿ ಬಂದಿದ್ದರಿಂದ ನಿಯಂತ್ರಣ ತಪ್ಪಿ ಹೊಂಡಕ್ಕೆ ಧುಮುಕಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ರೇನ್ ಸಹಾಯದಿಂದ ವಾಹನವನ್ನು ಹೊರತೆಗೆದಿದ್ದಾರೆ.

ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಸೇರಿದಂತೆ ಎಂಟು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಮಹಿಳೆ ಮತ್ತು ಇನ್ನೊಂದು ಮಗು ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ವಿವರಿಸಿದರು.

8 dead as car falls into pond in Chhattisgarh

Related Stories