ಗುಜರಾತ್‌ನಲ್ಲಿ ಭಾರೀ ಅವಘಡ, ಗೋಡೆ ಕುಸಿದು 9 ಕಾರ್ಮಿಕರು ಸಾವು; ಪ್ರಧಾನಿ ಮೋದಿ ಸಂತಾಪ
wall collapse in Gujarat Mehsana : ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಭೀಕರ ಅವಘಡ ಸಂಭವಿಸಿದೆ. ಕಡಿ ತಾಲೂಕಿನ ಜಸಾಲಪುರ ಗ್ರಾಮದ ಬಳಿ ಕಂಪನಿಯ ಗೋಡೆ ಕುಸಿದು ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ತಲುಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಮಾಹಿತಿ ಪ್ರಕಾರ ಇಲ್ಲಿನ ಕಂಪನಿಯೊಂದಕ್ಕೆ ಟ್ಯಾಂಕ್ ಅಳವಡಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಗೋಡೆ ಕುಸಿದಿದ್ದು, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಿಲುಕಿಕೊಂಡರು. ಘಟನೆ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ರಕ್ಷಣಾ ತಂಡ ಕೂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಆಂಬ್ಯುಲೆನ್ಸ್ ಮತ್ತು ಪೊಲೀಸ್ ತಂಡಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಖಾಸಗಿ ಕಂಪನಿಯ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ, ಮಧ್ಯಾಹ್ನ 1.45ರ ಸುಮಾರಿಗೆ ಅವಘಡ ಸಂಭವಿಸಿದೆ. 9-10 ಜನರು ಅವಶೇಷಗಳ ಅಡಿ ಸಿಲುಕಿರುವ ಮಾಹಿತಿ ಇದೆ, ಅದರಲ್ಲಿ ಮೊದಲ 6 ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ.
19 ವರ್ಷದ ಬಾಲಕ ಕೂಡ ಇಲ್ಲಿ ಸಿಕ್ಕಿಬಿದ್ದಿದ್ದು, ಆತನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ
ಘಟನೆ ಬಗ್ಗೆ ಪ್ರಧಾನಿ ಮೋದಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಅವರು, ಗುಜರಾತ್‌ನ ಮೆಹ್ಸಾನಾದಲ್ಲಿ ಗೋಡೆ ಕುಸಿತದ ಅಪಘಾತವು ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ. ದೇವರು ಅವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ಇದರೊಂದಿಗೆ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಲ್ಲಿ ತೊಡಗಿದೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ನೀಡುವುದಾಗಿ ಘೋಷಿಸಲಾಗಿದೆ.
9 workers died due to wall collapse in Gujarat