ಎಂಎಸ್ ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಯುವಕನ ಬಂಧನ

ಎಂಎಸ್‌ ಧೋನಿ ಅವರ ಮಗಳು 5 ವರ್ಷದ ಝಿವಾ ಧೋನಿ ಗೆ ಅತ್ಯಾಚಾರ ಬೆದರಿಕೆ ಹಾಕಿದ್ದಕ್ಕಾಗಿ 16 ವರ್ಷದ ಗುಜರಾತ್ ಯುವಕನ ಬಂಧನ

ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಕ್ರಿಕೆಟ್ ತಂಡಗಳ ನಡುವಿನ ಐಪಿಎಲ್ 2020 ಪಂದ್ಯದ ನಂತರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಂಎಸ್ ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಸಂದೇಶವನ್ನು ಪೋಸ್ಟ್ ಮಾಡಿದ್ದ ಗುಜರಾತ್ ಮೂಲದ ಯುವಕನನ್ನು ಬಂಧಿಸಲಾಗಿದೆ.

( Kannada News ) : ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಅಪ್ರಾಪ್ತ ಮಗಳ ವಿರುದ್ಧ ಅತ್ಯಾಚಾರ ಬೆದರಿಕೆ ಹಾಕಿದ್ದಕ್ಕಾಗಿ 16 ವರ್ಷದ ಯುವಕನನ್ನು ಗುಜರಾತ್‌ನ ಮುಂಡ್ರಾದಿಂದ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಕೆಲವು ದಿನಗಳ ಹಿಂದೆ ಧೋನಿ ಅವರ ಪತ್ನಿ ಸಾಕ್ಷಿ ಧೋನಿ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಅಸಹ್ಯಕರ ಅತ್ಯಾಚಾರ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ನಮ್ನಾ ಕಪಾಯ ಗ್ರಾಮದ 12 ನೇ ತರಗತಿ ವಿದ್ಯಾರ್ಥಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ : ಕಾಣೆಯಾಗಿದ್ದ ಯುವತಿಯ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆ

ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಕ್ರಿಕೆಟ್ ತಂಡಗಳ ನಡುವಿನ ಐಪಿಎಲ್ 2020 ಪಂದ್ಯದ ನಂತರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಂಎಸ್ ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಸಂದೇಶವನ್ನು ಪೋಸ್ಟ್ ಮಾಡಿದ್ದ ಗುಜರಾತ್ ಮೂಲದ ಯುವಕನನ್ನು ಬಂಧಿಸಲಾಗಿದೆ.

ಇದನ್ನೂ ಓದಿ : ಮಗನ ಮುಂದೆಯೇ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ರಾಂಚಿ ಪೊಲೀಸರು ಬಾಲಕನ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ್ದು, ಆತನೇ ಬೆದರಿಕೆ ಸಂದೇಶವನ್ನು ಪೋಸ್ಟ್ ಮಾಡಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.

ಎಂಎಸ್ ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಯುವಕ ಕಚ್ ಜಿಲ್ಲೆಯ ಮುಂಡ್ರಾ ಮೂಲದವನು ಎಂದು ರಾಂಚಿ ಪೊಲೀಸರು ತಿಳಿಸಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

“ಸಂದೇಶವನ್ನು ಪೋಸ್ಟ್ ಮಾಡಿದ ಯುವಕ ಅವನೇ ಎಂದು ದೃಢಪಟ್ಟಿದ್ದು, ರಾಂಚಿ ಪೊಲೀಸರ ತಂಡವು ಯುವಕನನ್ನು ವಶಕ್ಕೆ ತೆಗೆದುಕೊಳ್ಳಲು ನಾಳೆ ಕಚ್‌ಗೆ ತಲುಪುವ ಸಾಧ್ಯತೆಯಿದೆ.

ಬೆದರಿಕೆಯ ಸ್ವರೂಪವು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ, ಹಲವಾರು ಕ್ರಿಕೆಟಿಗರು, ರಾಜಕಾರಣಿಗಳು ಮತ್ತು ಗಣ್ಯರು ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ ಮತ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮತ್ತು ಹಲವು ಕ್ರಿಕೆಟ್ ಅಭಿಮಾನಿಗಳು ಎಂಎಸ್ ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಯುವಕನ ಬಂಧನವಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.

Web Title : A 16-year-old boy was nabbed for allegedly issuing threats against cricketer Mahendra Singh Dhoni’s minor daughter

Scroll Down To More News Today