ಮುಂಬೈ ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ

fire broke out in Mumbai City Center Mall : ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ

ಬೆಂಕಿಯನ್ನು ನಂದಿಸುವಾಗ ಕೆಲ ಅಗ್ನಿಶಾಮಕ ಸಿಬ್ಬಂದಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಗ್ನಿಶಾಮಕ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಮುಂಬೈನ ಜೆಜೆ ಆಸ್ಪತ್ರೆಗೆ ಸಾಗಿಸಲಾಗಿದೆ.

( Kannada News Today ) : ಮುಂಬೈ (ಮಹಾರಾಷ್ಟ್ರ) : ಮುಂಬೈ ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ : ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ದಕ್ಷಿಣ ಮುಂಬೈನ ಸಿಟಿ ಸೆಂಟರ್ ಮಾಲ್‌ನಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.

ಮೊದಲಿಗೆ ಬೆಂಕಿ ನೆಲ ಮಹಡಿಗೆ ಹರಡಿದೆ, ತಕ್ಷಣ ಕಾರ್ಯ ಪ್ರವೃತ್ತರಾದ 20 ಅಗ್ನಿಶಾಮಕ ವಾಹನಗಳು ಬಂದು ಬೆಂಕಿಯನ್ನು ನಂದಿಸಿದವು. ಬೆಂಕಿ ಕಾಣಿಸಿಕೊಂಡಾಗ 300 ಜನರು ಸಿಟಿ ಸೆಂಟರ್ ಮಾಲ್‌ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿಯನ್ನು ನಂದಿಸುವಾಗ ಕೆಲ ಅಗ್ನಿಶಾಮಕ ಸಿಬ್ಬಂದಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಗ್ನಿಶಾಮಕ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಮುಂಬೈನ ಜೆಜೆ ಆಸ್ಪತ್ರೆಗೆ ಸಾಗಿಸಲಾಗಿದೆ.

>> ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ India News in Kannada | National News in Kannada ಕ್ಲಿಕ್ಕಿಸಿ.

ನೆಲ ಮಹಡಿಯಿಂದ ಭುಗಿಲೆದ್ದ ಬೆಂಕಿ ಮೂರು ಮಹಡಿಗಳಿಗೆ ಹರಡಿತು. ಮುನ್ನೆಚ್ಚರಿಕೆ ಕ್ರಮವಾಗಿ, ಸಿಟಿ ಸೆಂಟರ್ ಮಾಲ್ ಸುತ್ತಮುತ್ತಲಿನ ಕಟ್ಟಡಗಳಲ್ಲಿನ ಜನರನ್ನು ಸ್ಥಳಾಂತರಿಸಲಾಯಿತು.

ಇದನ್ನೂ ಓದಿ : ದೆಹಲಿ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ

ಸದ್ಯ ಅಗ್ನಿಶಾಮಕ ದಳದವರು ಸಿಟಿ ಸೆಂಟರ್ ಮಾಲ್‌ನಿಂದ 300 ಜನರನ್ನು ಸ್ಥಳಾಂತರಿಸಿದ್ದಾರೆ. ಬೆಂಕಿಯ ಕಾರಣ ಇನ್ನೂ ತಿಳಿದಿಲ್ಲ. ಮುಂಬೈನಲ್ಲಿ ಗುರುವಾರ ಎರಡು ಕಡೆ ಬೆಂಕಿ ಕಾಣಿಸಿಕೊಂಡಿದೆ. ಕುರ್ಲಾ ವೆಸ್ಟ್ ಪ್ರದೇಶದ ಗಾರ್ಮೆಂಟ್ ಕಾರ್ಖಾನೆಯಲ್ಲಿ ಸಹ ಬೆಂಕಿ ಕಾಣಿಸಿಕೊಂಡಿದೆ.

Scroll Down To More News Today