ತಾಯಿಯ ಎದುರೇ ಎರಡು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

ಎರಡೂವರೆ ವರ್ಷದ ಬಾಲಕಿಯ ಮೇಲೆ ತಾಯಿಯ ಮುಂದೆಯೇ ಅತ್ಯಾಚಾರ, ಕೊಲೆ. ಆಕೆಯ ಗೆಳೆಯನಿಂದಲೇ ಈ ದುಷ್ಕೃತ್ಯ

ಮುಂಬೈ: ತಾಯಿ ಎಂಬ ಪದಕ್ಕೆ ಶಾಶ್ವತವಾದ ಕಳಂಕ ತಂದಿದ್ದಾಳೆ ಈ ಮಹಿಳೆ. ತನ್ನ ಮಗುವಿನ ಮೇಲೆ ತನ್ನ ಕಣ್ಣೆದುರೇ ಅತ್ಯಾಚಾರ ನಡೆಯುವುದನ್ನು ಆಕೆ ನೋಡುತ್ತಿದ್ದಳು ಎನ್ನಲಾಗಿದೆ. ನೀಚ ವ್ಯಕ್ತಿ ಎರಡೂವರೆ ವರ್ಷದ ಆ ಮಗು  ಸಾಯುತ್ತಿದ್ದರೂ ಯಾವುದೇ ಚಿಂತೆ ಪಟ್ಟಿಲ್ಲ.

ಈ ಘಟನೆ ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ. ಆರೋಪಿಯು ಮಹಿಳೆಯ ಗೆಳೆಯ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ರೀನಾ ಶೇಖ್ ಎಂಬ ಮಹಿಳೆ ಮತ್ತು ಆಕೆಯ ಪ್ರಿಯಕರ ಫರ್ಹಾನ್ ಶೇಖ್ ಎಂಬ ನೀಚನನ್ನು ಬಂಧಿಸಿದ್ದಾರೆ.

ಬಾಲಕಿಯನ್ನು ಮೃತ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತಂದ ನಂತರ ಅನುಮಾನಗೊಂಡ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ತಾಯಿಯ ಕ್ರೌರ್ಯದ ಬಗ್ಗೆ ತಿಳಿದುಬಂದಿದೆ. ಸೋಮವಾರ ಮಗುವಿನ ಮೇಲೆ ತಾಯಿಯ ಸಮ್ಮುಖದಲ್ಲೇ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿ ರೀನಾ ಮಗುವಿನ ಮೇಲೆ ಅತ್ಯಾಚಾರ ನಡೆಯುತ್ತಿದ್ದರೂ ಮಧ್ಯಪ್ರವೇಶಿಸಲಿಲ್ಲ, ಮಾತ್ರವಲ್ಲದೆ ಆಸ್ಪತ್ರೆ ಸಿಬ್ಬಂದಿಯನ್ನು ದಾರಿ ತಪ್ಪಿಸಿ ಬಾಲಕಿಗೆ ಮೂರ್ಛೆ ರೋಗವಿದೆ ಎಂದು ಹೇಳಿದ್ದಾಳೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

ಇಬ್ಬರ ವಿರುದ್ಧವೂ ಪೋಕ್ಸೋ ಕಾಯ್ದೆಯಡಿಯಲ್ಲಿ ಹಾಗೂ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಸೇರಿದಂತೆ ಪೋಕ್ಸೋ ಕಾಯ್ದೆಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಇಬ್ಬರೂ ಆರೋಪಿಗಳು ಪ್ರಸ್ತುತ ಪೊಲೀಸರ ವಶದಲ್ಲಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

A Two Year Old Girl Was Raped In Front Of Her Mother

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories