ಪತ್ರಕರ್ತ ಮೊಹಮ್ಮದ್ ಜುಬೇರ್ ಗೆ ಜೀವ ಬೆದರಿಕೆ, ಸುಪ್ರೀಂ ಕೋರ್ಟ್ ಮೊರೆ
ವಿವಾದಾತ್ಮಕ ಟ್ವೀಟ್ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನವದೆಹಲಿ: ವಿವಾದಾತ್ಮಕ ಟ್ವೀಟ್ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮೊಹಮ್ಮದ್ ಜುಬೇರ್ ಅವರ ಪರ ವಕೀಲ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದ್ದು, ಅವರಿಗೆ ಜೀವ ಬೆದರಿಕೆ ಇದೆ ಮತ್ತು ಅವರಿಗೆ ಹಲವಾರು ಜನರಿಂದ ಬೆದರಿಕೆಗಳು ಬರುತ್ತಿವೆ ಮತ್ತು ಅವರ ಸುರಕ್ಷತೆಯ ಬಗ್ಗೆ ನಮಗೆ ಆತಂಕವಿದೆ ಎಂದಿದ್ದಾರೆ.
ಜಾಮೀನು ಅರ್ಜಿಯನ್ನು ಸ್ವೀಕರಿಸಿದ ಕೂಡಲೇ ವಿಚಾರಣೆಯನ್ನು ಕೈಗೆತ್ತಿಕೊಳ್ಳುವಂತೆ ಜುಬೇರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ರಿಜಿಸ್ಟ್ರಿಯಲ್ಲಿ ಪಟ್ಟಿ ಮಾಡಲಾದ ವಿಷಯದ ಬಗ್ಗೆ ನಾಳೆ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ದೃಢಪಡಿಸಿದೆ.
ಹಿಂದೂ ಸನ್ಯಾಸಿಗಳನ್ನು ಅವಹೇಳನ ಮಾಡುವ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಕಳೆದ ವಾರ ಜುಬೈರ್ ಅವರನ್ನು ಬಂಧಿಸಿದ್ದ ದೆಹಲಿ ಪೊಲೀಸರು ಸೋಮವಾರ ಯುಪಿಯ ಸೀತಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯ ಜುಬೈರ್‌ನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
alt-news-co-founder-mohammed-zubair-moves-sc-for-bail
Follow us On
Google News |