14ರಂದು ಆಂಧ್ರಪ್ರದೇಶದ ತಿರುಪತಿಗೆ ಅಮಿತ್ ಶಾ ಭೇಟಿ

14 ರಂದು ಆಂಧ್ರಪ್ರದೇಶದ ತಿರುಪತಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ಇದರ ಭಾಗವಾಗಿ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ತಮಿಳುನಾಡು, ಪಾಂಡಿಚೇರಿ, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ನವ ದೆಹಲಿ : 14 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

14ರಂದು ಆಂಧ್ರಪ್ರದೇಶದ ತಿರುಪತಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ಇದರ ಭಾಗವಾಗಿ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ.

ತಮಿಳುನಾಡು, ಪಾಂಡಿಚೇರಿ, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೆ, ಅಂಡಮಾನ್-ನಿಕೋಬಾರ್, ಲಕ್ಷದ್ವೀಪ ಕಾರ್ಯನಿರ್ವಾಹಕರು ಮತ್ತು ಪಾಂಡಿಚೇರಿಯ ಉಪ ರಾಜ್ಯಪಾಲರು ಕೂಡ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಸಭೆಯಲ್ಲಿ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿ ನಿರ್ಧಾರಗಳು ಸೇರಿದಂತೆ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಜತೆಗೆ ಕೆಲ ಪ್ರಕರಣಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವಿನ ಸಂಘರ್ಷದ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ. ಅಂತರರಾಜ್ಯ ನದಿ ನೀರು ಹಂಚಿಕೆ ಹಾಗೂ ಕೇಂದ್ರ ಸರ್ಕಾರದ ನದಿ ಜೋಡಣೆ ಯೋಜನೆಗಳ ಬಗ್ಗೆಯೂ ಮಾತುಕತೆಯಲ್ಲಿ ಪ್ರಮುಖವಾಗಿ ಗಮನಹರಿಸಲಾಗುವುದು ಎಂದು ಬಲ್ಲ ಮೂಲಗಳು ತಿಳಿಸಿವೆ.

ಇದೇ ವೇಳೆ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರವಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ಅಮಿತ್ ಶಾ ಅವರೊಂದಿಗೆ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Stay updated with us for all News in Kannada at Facebook | Twitter
Scroll Down To More News Today