Amit Shah, ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ವಿಷಾದ ವ್ಯಕ್ತಪಡಿಸಿದ ಅಮಿತ್ ಶಾ

ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವಿಗೀಡಾದ ಘಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಂತಾಪ ಸೂಚಿಸಿದ್ದಾರೆ. 

ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವಿಗೀಡಾದ ಘಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಂತಾಪ ಸೂಚಿಸಿದ್ದಾರೆ.

ಅಹಮದ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡದಿಂದ ನಾನು ಜರ್ಜರಿತನಾಗಿದ್ದೆ. ಇಂತಹ ದುರಂತದ ಸಮಯದಲ್ಲಿ ಮೃತರ ಕುಟುಂಬಗಳಿಗೆ ದೇವರು ಆಶೀರ್ವಾದ ನೀಡಲಿ. ಅದೇ ರೀತಿ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಅಹ್ಮದ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

17 ಕೋವಿಡ್ ರೋಗಿಗಳಿದ್ದ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ಅವರನ್ನು ಸ್ಥಳಾಂತರಿಸಲು ಪ್ರಯತ್ನಿಸಿದರು ಮತ್ತು ದುರದೃಷ್ಟವಶಾತ್ ಸ್ಥಳಾಂತರ ಪ್ರಕ್ರಿಯೆಯಲ್ಲಿ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ ಹೇಳಿದ್ದಾರೆ. ಗಾಯಗೊಂಡ ಏಳು ಮಂದಿಯಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

Stay updated with us for all News in Kannada at Facebook | Twitter
Scroll Down To More News Today