104 ಗಂಟೆಗಳ ಕಾರ್ಯಾಚರಣೆ, ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕನ ರಕ್ಷಣೆ

ಛತ್ತೀಸ್‌ಗಢದಲ್ಲಿ 104 ಗಂಟೆಗಳ ಕಾರ್ಯಾಚರಣೆಯ ನಂತರ ಬೋರ್‌ವೆಲ್‌ಗೆ ಬಿದ್ದ 11 ವರ್ಷದ ಬಾಲಕನನ್ನು ರಕ್ಷಿಸಲಾಗಿದೆ, ಕಿವುಡ ಮತ್ತು ಮೂಕ ಮಗು ರಾಹುಲ್ ಸಾಹೂ 80 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ. ಜೂನ್ 10ರಂದು ಮನೆಯ ಹಿಂದಿನ ಹಳ್ಳಕ್ಕೆ ಬಿದ್ದಿದ್ದ. ಬಾಲಕ ಸುಮಾರು 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಸುಮಾರು 500 ಎನ್ ಡಿಆರ್ ಎಫ್, ಸೇನೆ ಮತ್ತು ಪೊಲೀಸ್ ಸಿಬ್ಬಂದಿ ರಾಹುಲ್ ರಕ್ಷಣೆಗಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದು ಸುದೀರ್ಘ ರಕ್ಷಣಾ ಕಾರ್ಯಾಚರಣೆ ಎಂದು ಅಧಿಕಾರಿಗಳು ಹೇಳುತ್ತಾರೆ. 2006ರಲ್ಲಿ ಹರಿಯಾಣದ ಕುರುಕ್ಷೇತ್ರದಲ್ಲಿ 50 ಗಂಟೆಗಳ ಬಳಿಕ ಮಗುವನ್ನು ರಕ್ಷಿಸಲಾಗಿತ್ತು. ಛತ್ತೀಸ್‌ಗಢ ಸಿಎಂ ಭೂಪೇಶ್ ಭಾಗಲ್ ರಕ್ಷಣಾ ಕಾರ್ಯಾಚರಣೆ ಮತ್ತು ಬಾಲಕನನ್ನು ರಕ್ಷಿಸಿದ ರಕ್ಷಣಾ ತಂಡಕ್ಕೆ ಧನ್ಯವಾದಗಳು ತಿಳಿಸಿದ್ದಾರೆ. ಮಗು ರಾಹುಲ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

An 11 Year Old Boy Who Fell Into A Borewell Was Rescued After A 104 Hour Operation In Chhattisgarh

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ