ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ, ತಪ್ಪಿದ ಭಾರೀ ಅನಾಹುತ
Air India Flight Fire: ಅಬುಧಾಬಿಯಿಂದ ಕೇರಳದ ಕ್ಯಾಲಿಕಟ್‌ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ
Air India Flight Fire: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭಾರೀ ಅನಾಹುತ ತಪ್ಪಿದೆ, ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಗಾಳಿಯಲ್ಲಿದ್ದಾಗ, ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ಬೇರೆಡೆಗೆ ತಿರುಗಿಸಿ ಸುರಕ್ಷಿತವಾಗಿ ಇಳಿಸಿದರು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ
ವಿವರಗಳಿಗೆ ಹೋಗುವುದಾದರೆ.. ಶುಕ್ರವಾರ ಬೆಳಗ್ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಬುಧಾಬಿಯಿಂದ ಕೇರಳದ ಕ್ಯಾಲಿಕಟ್ (ಕೋಝಿಕೋಡ್)ಗೆ ಹೊರಟಿತ್ತು. 1000 ಅಡಿ ಎತ್ತರದಲ್ಲಿ ವಿಮಾನ ಟೇಕಾಫ್ ಆಗುವಾಗ ಎಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಇದರಿಂದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ಹಿಂದಕ್ಕೆ ತಿರುಗಿಸಿ ಸುರಕ್ಷಿತವಾಗಿ ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಇಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಘಡದ ವೇಳೆ ವಿಮಾನದಲ್ಲಿ 184 ಪ್ರಯಾಣಿಕರಿದ್ದರು.. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಅಧಿಕಾರಿಗಳು ತಿಳಿಸಿದ್ದಾರೆ.
An Air India Express Flight Coming From Abu Dhabi To Calicut In Kerala Caught Fire In The Engine
Follow us On
Google News |
Advertisement