ಮತ್ತೊಂದು ಮಂಕಿಪಾಕ್ಸ್ ಪ್ರಕರಣ
ದೇಶದಲ್ಲಿ ಮಂಕಿಪಾಕ್ಸ್ ತಲ್ಲಣ ಮೂಡಿಸುತ್ತಿದೆ. ದೆಹಲಿಯ 34 ವರ್ಷದ ವ್ಯಕ್ತಿಯೊಬ್ಬರಿಗೆ ವೈರಸ್ ಇರುವುದು ಭಾನುವಾರ ಪತ್ತೆಯಾಗಿದೆ.
ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ತಲ್ಲಣ ಮೂಡಿಸುತ್ತಿದೆ. ದೆಹಲಿಯ 34 ವರ್ಷದ ವ್ಯಕ್ತಿಯೊಬ್ಬರಿಗೆ ವೈರಸ್ ಇರುವುದು ಭಾನುವಾರ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ನಾಲ್ಕಕ್ಕೆ ತಲುಪಿವೆ. ಕೇರಳದಲ್ಲಿ ಮೊದಲ ಮೂರು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ. ಆದರೆ ಇತ್ತೀಚೆಗೆ ಸಂತ್ರಸ್ತ ವಿದೇಶ ಪ್ರವಾಸ ಮಾಡದಿರುವುದು ಆತಂಕಕಾರಿಯಾಗಿದೆ.
ಇತ್ತೀಚೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ. ಮೂರು ದಿನಗಳ ಹಿಂದೆಯೇ ಅವರಿಗೆ ಮಂಕಿಪಾಕ್ಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ತಕ್ಷಣ ಅವರನ್ನು ದೆಹಲಿಯ ಲೋಕನಾಯಕ್ ಜಯಪ್ರಕಾಶ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.
ಶನಿವಾರ ಅವರ ಮಾದರಿಗಳನ್ನು ಪುಣೆಯ ವೈರಾಲಜಿ ಲ್ಯಾಬ್‌ಗೆ ಕಳುಹಿಸಲಾಗಿದ್ದು, ವರದಿಯಲ್ಲಿ ಮಂಕಿಪಾಕ್ಸ್ ಪಾಸಿಟಿವ್ ಕಂಡುಬಂದಿದೆ. ಅವರ ಜೊತೆಗಿದ್ದವರನ್ನು ಗುರುತಿಸಿ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Another Monkeypox Case
Follow us On
Google News |