ಸ್ನೇಹಿತನಿಗೆ ಡ್ರಗ್ ನೀಡಿ, ಆತನ ಪತ್ನಿಯ ಮೇಲೆ ಅತ್ಯಾಚಾರ

ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಸೇನೆಯ ಕಲೋನಿಯಲ್ ವಿರುದ್ಧ ಭಾನುವಾರ ದೂರು ದಾಖಲಾಗಿದೆ.

(Kannada News) : ಕಾನ್ಪುರ: ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸೇನೆಯ ಕಲೋನಿಯಲ್ ವಿರುದ್ಧ ಭಾನುವಾರ ದೂರು ದಾಖಲಿಸಲಾಗಿದೆ.

ಸಂತ್ರಸ್ತೆಯ ಪತಿ, ಸೇನಾಧಿಕಾರಿ ವಿರುದ್ಧ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಪೂರ್ವ) ರಾಜ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.

ದೂರಿನ ಪ್ರಕಾರ, ಅವರ ಪತ್ನಿ ರಷ್ಯಾ ಮೂಲದವರಾಗಿದ್ದು, ಕಳೆದ 10 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಅಧಿಕಾರಿ ಅವರನ್ನು ತಮ್ಮ ಮನೆಯ ಪಾರ್ಟಿಗೆ ಆಹ್ವಾನಿಸಿದ್ದ ವೇಳೆ ಈ ಘಟನೆ ನಡೆದಿರುವುದಾಗಿ ಉಲ್ಲೇಖಿಸಲಾಗಿದೆ.

ಈ ಸಮಯದಲ್ಲಿ, ನನಗೆ ಪ್ರಜ್ಞೆ ತಪ್ಪಿಸಲು ಮಾದಕ ದ್ರವ್ಯ ನೀಡಿ, ನನ್ನ ಹೆಂಡತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ತನ್ನ ಹೆಂಡತಿ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಆರೋಪಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಶೋಧ ಮುಂದುವರಿಸಿದ್ದಾರೆ.