ಡ್ರಗ್ಸ್ ಪ್ರಕರಣ: ಇಂದು ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿದೆ. ಇಂದು ಬಾಂಬೆ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. 

ಮುಂಬೈ: ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿದೆ. ಇಂದು ಬಾಂಬೆ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

23ರ ಹರೆಯದ ಖಾನ್ ಪರವಾಗಿ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ವಾದ ಮಂಡಿಸಲಿದ್ದಾರೆ. ಆರ್ಯನ್ ಖಾನ್ ಅವರನ್ನು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿದೆ. ಖಾನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಈಗಾಗಲೇ ಎರಡು ಬಾರಿ ತಿರಸ್ಕರಿಸಿದೆ.

ಈ ನಡುವೆ ಪ್ರಕರಣ ಹೊಸ ತಿರುವು ಪಡೆದಿದೆ. ಪ್ರಕರಣದ ಪ್ರತ್ಯಕ್ಷದರ್ಶಿ ಪ್ರಭಾಕರ್ ಸೈಲ್ ದೂರಿನಂತೆ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ಇಬ್ಬರು ಸೇರಿ ಈಗಾಗಲೇ ಬಂಧಿತರಾಗಿರುವ ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಲು 25 ಕೋಟಿ ರೂ. ಲಂಚ ಕೇಳಿದೆ ಎಂಬ ಪ್ರಕರಣಕ್ಕೆ ಎನ್‌ಸಿಬಿ ನಿರಾಕರಿಸಿದೆ. ಸಂಸ್ಥೆಯ ವಿರುದ್ಧ ಅಪಪ್ರಚಾರದ ಭಾಗವಾಗಿ ಈ ಆರೋಪಗಳನ್ನು ಮಾಡಲಾಗಿದೆ ಎಂದಿದೆ.

Stay updated with us for all News in Kannada at Facebook | Twitter
Scroll Down To More News Today