ಆಶಿಶ್ ಮಿಶ್ರಾ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಲಖಿಂಪುರಿ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ನವದೆಹಲಿ: ಲಖಿಂಪುರಿ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ಕಳೆದ ವರ್ಷ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾನೆ.
ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಂತ್ರಸ್ತ ರೈತರ ಕುಟುಂಬಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಜೆಐ ಎನ್ವಿ ರಮಣ ನೇತೃತ್ವ ಇಂದು ತೀರ್ಪು ನೀಡಿದೆ.
ಅಪ್ರಸ್ತುತ ಆಧಾರದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಅಗತ್ಯ ವಿಷಯಗಳನ್ನು ನ್ಯಾಯಾಲಯ ಪರಿಗಣಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಒಂದು ವಾರದೊಳಗೆ ಶರಣಾಗುವಂತೆ ಆಶಿಶ್ ಮಿಶ್ರಾ ಅವರಿಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಪ್ರಕರಣವನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ಗೆ ಸೂಚಿಸಿದೆ. ಸಂತ್ರಸ್ತರ ಕುಟುಂಬಗಳ ಅಭಿಪ್ರಾಯವನ್ನು ಹೈಕೋರ್ಟ್ ಸರಿಯಾಗಿ ಆಲಿಸಿಲ್ಲ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ.
Ashish Mishras Bail Cancelled By Supreme Court In Farmers Killing Case
Follow Us on : Google News | Facebook | Twitter | YouTube