ವಿದ್ಯಾರ್ಥಿಗಳನ್ನು ಮತಾಂತರ ಮಾಡಿದ ಆರೋಪ, ಶಾಲೆಯ ಮೇಲೆ ದಾಳಿ

ವಿದ್ಯಾರ್ಥಿಗಳನ್ನು ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ನೂರಾರು ಸ್ಥಳೀಯರೊಂದಿಗೆ ಸೇರಿ ಮಧ್ಯಪ್ರದೇಶದಲ್ಲಿ ಕ್ರಿಶ್ಚಿಯನ್ ಮಿಷನರಿ ಸಂಘಟನೆ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳನ್ನು ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ನೂರಾರು ಸ್ಥಳೀಯರೊಂದಿಗೆ ಸೇರಿ ಮಧ್ಯಪ್ರದೇಶದಲ್ಲಿ ಕ್ರಿಶ್ಚಿಯನ್ ಮಿಷನರಿ ಸಂಘಟನೆ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ.

12ನೇ ತರಗತಿ ವಿದ್ಯಾರ್ಥಿಗಳು ಗಣಿತ ಪರೀಕ್ಷೆಗೆ ಹಾಜರಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದಿಶಾ ಜಿಲ್ಲೆಯ ಬಸೋಡಾ ಪಟ್ಟಣದ ಸೇಂಟ್ ಜೋಸೆಫ್ ಶಾಲೆಯ ಎಂಟು ವಿದ್ಯಾರ್ಥಿಗಳನ್ನು ಮತಾಂತರ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬಂದ ಮೇಲೆ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಆಗಮಿಸಿ ಅವರನ್ನು ಚದುರಿಸಿದರು. ದಾಳಿಯಿಂದ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಕಲ್ಲು ತೂರಾಟದಿಂದ ವಿದ್ಯಾರ್ಥಿಗಳು ಗಾಬರಿಗೊಂಡರು. ಶಾಲೆಯ ಮ್ಯಾನೇಜರ್ ಬ್ರದರ್ ಆಂಟನಿ, ಸ್ಥಳೀಯ ಮಾಧ್ಯಮಗಳಿಂದ ಹಲ್ಲೆಯ ಬಗ್ಗೆ ಒಂದು ದಿನ ಮುಂಚಿತವಾಗಿ ತನಗೆ ಮಾಹಿತಿ ನೀಡಲಾಗಿತ್ತು, ನಂತರ ಪೊಲೀಸರಿಗೆ ತಿಳಿಸಿದ್ದೇನೆ, ಆದರೆ ಪೊಲೀಸರು ಸರಿಯಾದ ಭದ್ರತಾ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದರು.

ಧಾರ್ಮಿಕ ಮತಾಂತರದ ಸುದ್ದಿಯನ್ನು ನಿರಾಕರಿಸಿದ್ದಾರೆ. ಸ್ಥಳೀಯ ಬಜರಂಗದಳ ಮುಖಂಡ ನೀಲೇಶ್ ಅಗರ್ವಾಲ್ ಮತಾಂತರ ಆರೋಪದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಆದರೆ, ವಿಧ್ವಂಸಕ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮತಾಂತರಗೊಂಡವರ ತನಿಖೆಯನ್ನು ಆರಂಭಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today