ಯುಪಿ ಸಿಎಂ ಯೋಗಿ ಆದಿತ್ಯನಾಥ್ಗೆ ಬೆದರಿಕೆ ಕರೆ ಮಾಡಿದ್ದ ಮಹಿಳಾ ಟೆಕ್ಕಿ ಬಂಧನ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮುಂಬೈ ಪೊಲೀಸರು, ಥಾಣೆ ನಗರದಲ್ಲಿ ವಾಸಿಸುತ್ತಿರುವ ಫಾತಿಮಾ ಖಾನ್ (24) ಅನ್ನು ಬಂಧಿಸಿದ್ದಾರೆ
ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ದೂರವಾಣಿ ಕರೆ ಬಂದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕಿಯಂತೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.
ಈ ಹಿನ್ನೆಲೆ ತನಿಖೆ ಶುರು ಮಾಡಿದ ಪೊಲೀಸರು, ಮುಂಬೈ ನಗರ ಸಮೀಪದ ಥಾಣೆ ನಗರದಲ್ಲಿ ವಾಸಿಸುತ್ತಿರುವ ಫಾತಿಮಾ ಖಾನ್ (24) ಅನ್ನು ಬಂಧಿಸಿದ್ದಾರೆ. ಪೊಲೀಸರು ಫಾತಿಮಾ ಖಾನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಆಕೆಯ ಫೋನ್ ನಂಬರ್ ನಿಂದ ಬೆದರಿಕೆ ಕರೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ.
ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್ಸಿ ಪದವಿ ಮುಗಿಸಿರುವ ಫಾತಿಮಾ ಖಾನ್ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸ್ ಮೂಲಗಳ ಪ್ರಕಾರ, ಆಕೆ ತನ್ನ ಕುಟುಂಬದೊಂದಿಗೆ ಥಾಣೆಯಲ್ಲಿ ವಾಸಿಸುತ್ತಾಳೆ ಮತ್ತು ಆಕೆಯ ತಂದೆ ಮರದ ವ್ಯಾಪಾರ ನಡೆಸುತ್ತಿದ್ದಾರೆ.
ಶನಿವಾರ ಸಂಜೆ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಕರೆ ಬಂದಿತ್ತು. ಅಪರಿಚಿತ ದೂರವಾಣಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿತ್ತು. ಕಳೆದ ಕೆಲವು ವಾರಗಳಿಂದ ಮುಂಬೈ ಪೊಲೀಸರಿಗೆ ವಿವಿಧ ಜನರ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ. ಇವುಗಳಲ್ಲಿ ಹೆಚ್ಚಿನವು ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಬೆದರಿಕೆ ಕರೆಗಳು ಬರುತ್ತಿವೆ. ಇತ್ತೀಚೆಗೆ ಬಾಬಾ ಸಿದ್ದಿಕಿ ಎಂಬ ಎನ್‌ಸಿಪಿ ನಾಯಕನನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗುಂಡಿಕ್ಕಿ ಹತ್ಯೆ ಮಾಡಿತ್ತು.
Behind Yogi Adityanath Death Threat A 24 Year Old It Graduate From Thane