ಭಿವಂಡಿ ಪೊಲೀಸರಿಂದ ನೂಪುರ್ ಶರ್ಮಾಗೆ ಸಮನ್ಸ್ ಜಾರಿ
ಮುಂಬೈ: ಮಹಾರಾಷ್ಟ್ರದ ಭಿವಂಡಿ ಪೊಲೀಸರು ಬಿಜೆಪಿ ರಾಷ್ಟ್ರೀಯ ವಕ್ತಾರ ನೂಪುರ್ ಶರ್ಮಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳ ಬಗ್ಗೆ ಸೋಮವಾರ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಮತ್ತೋರ್ವ ಬಿಜೆಪಿ ನಾಯಕ ನವೀನ್ ಕುಮಾರ್ ಜಿಂದಾಲ್ ಅವರಿಗೂ ಮೇ 15 ರಂದು ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಚೇತನ್ ಕಾಕಡೆ ತಿಳಿಸಿದ್ದಾರೆ. ದೂರಿನ ಮೇರೆಗೆ ಮೇ 30 ರಂದು ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನೂಪುರ್ ಶರ್ಮಾ ಅವರು ಪ್ರವಾದಿ ಕುರಿತು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 22ರಂದು ತಮ್ಮ ಮುಂದೆ ಹಾಜರಾಗುವಂತೆ ಥಾಣೆ ಜಿಲ್ಲಾ ಪೊಲೀಸರು ಈಗಾಗಲೇ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಚರ್ಚೆಯ ವಿಡಿಯೋ ತುಣುಕನ್ನು ನೀಡುವಂತೆ ಸುದ್ದಿ ವಾಹಿನಿಗೆ ಪೊಲೀಸರು ಸೂಚಿಸಿದ್ದಾರೆ. ಈ ತಿಂಗಳ 5 ರಂದು, ಪ್ರವಾದಿ ವಿರುದ್ಧ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ಮತ್ತು ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರನ್ನು ಉಚ್ಚಾಟಿಸಲಾಯಿತು.
ದೇಶ ಹಾಗೂ ಗಲ್ಫ್ ರಾಷ್ಟ್ರಗಳ ಒತ್ತಡದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ನಂತರ ನೂಪುರ್ ಶರ್ಮಾ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಿದರು.
Bhiwandi Police Summon Nupur Sharma
Our Whatsapp Channel is Live Now 👇