ಬಿಹಾರದಲ್ಲಿ ಸ್ಫೋಟ ಆರು ಮಂದಿ ಸಾವು, ಎಂಟು ಮಂದಿಗೆ ಗಾಯ

ಬಿಹಾರದ ಪಟಾಕಿ ವ್ಯಾಪಾರಿಯೊಬ್ಬರ ಮನೆಯಲ್ಲಿ ಭಾನುವಾರ ಭಾರೀ ಸ್ಫೋಟ ಸಂಭವಿಸಿದೆ. ಪರಿಣಾಮ ಆರು ಮಂದಿ ಪ್ರಾಣ ಕಳೆದುಕೊಂಡು ಎಂಟು ಮಂದಿ ಗಾಯಗೊಂಡಿದ್ದಾರೆ.

ಬಿಹಾರದ ಪಟಾಕಿ ವ್ಯಾಪಾರಿಯೊಬ್ಬರ ಮನೆಯಲ್ಲಿ ಭಾನುವಾರ ಭಾರೀ ಸ್ಫೋಟ ಸಂಭವಿಸಿದೆ. ಪರಿಣಾಮ ಆರು ಮಂದಿ ಪ್ರಾಣ ಕಳೆದುಕೊಂಡು ಎಂಟು ಮಂದಿ ಗಾಯಗೊಂಡಿದ್ದಾರೆ. ಸರನ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆಯ ಖುದೈಬಾಗ್ ನಲ್ಲಿ ಈ ದುರಂತ ನಡೆದಿದೆ.

ಸ್ಫೋಟದ ರಭಸಕ್ಕೆ ಮನೆಯ ಅರ್ಧ ಭಾಗ ಕುಸಿದಿದೆ. ಕೆಲವು ಭಾಗಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದರು. ಅವರನ್ನು ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ಗ್ರಾಮವು ಚಾಪ್ರಾ ಜಿಲ್ಲಾ ಕೇಂದ್ರದಿಂದ 30 ಕಿ.ಮೀ ದೂರದಲ್ಲಿದೆ.

ಸ್ಪೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಸರನ್ ಜಿಲ್ಲಾ ಎಸ್ಪಿ ಸಂತೋಷ್ ಕುಮಾರ್ ತಿಳಿಸಿದ್ದಾರೆ. ಈಗಾಗಲೇ ವಿಧಿವಿಜ್ಞಾನ ಹಾಗೂ ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಪರಿಹಾರ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.

ಬಿಹಾರದಲ್ಲಿ ಸ್ಫೋಟ ಆರು ಮಂದಿ ಸಾವು, ಎಂಟು ಮಂದಿಗೆ ಗಾಯ - Kannada News

ಆ ಮನೆಯಲ್ಲಿ ಪಟಾಕಿ ತಯಾರಿಸುವಾಗ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಫೋಟಗಳು ಸುಮಾರು ಒಂದು ಗಂಟೆಗಳ ಕಾಲ ಮುಂದುವರೆಯಿತು.

bihar six killed as house collapses due to blast in chapra

Follow us On

FaceBook Google News

Advertisement

ಬಿಹಾರದಲ್ಲಿ ಸ್ಫೋಟ ಆರು ಮಂದಿ ಸಾವು, ಎಂಟು ಮಂದಿಗೆ ಗಾಯ - Kannada News

Read More News Today