Devendra Fadnavis: ಮಹಾರಾಷ್ಟ್ರ ಮಾಜಿ ಸಿಎಂ ಫಡ್ನವೀಸ್ಗೆ ಕೊರೊನಾ ಪಾಸಿಟಿವ್
Devendra Fadnavis: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ
ಮಹಾರಾಷ್ಟ್ರ(Maharashtra): ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ಗೆ (Devendra Fadnavis) ಕೊರೊನಾ ಪಾಸಿಟಿವ್ (Corona Positive) ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಸದ್ಯ ಮನೆಯಲ್ಲಿಯೇ ಐಸೋಲೇಷನ್ನಲ್ಲಿದ್ದು, ವೈದ್ಯರ ಸೂಚನೆಯಂತೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ಅವರನ್ನು ಸಂಪರ್ಕಿಸಿದವರೆಲ್ಲರೂ ಕರೋನಾ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಿದ್ದಾರೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎಲ್ಲರೂ ಜಾಗರೂಕರಾಗಿರಬೇಕು ಎಂದು ಹೇಳಿದರು.
2020ರ ಅಕ್ಟೋಬರ್ನಲ್ಲೂ ಫಡ್ನವೀಸ್ ಗೆ ಕೊರೊನಾ ಸೋಂಕು ತಗುಲಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಮುಂಬೈನಲ್ಲಿ ಕೊರೊನಾ ಅಬ್ಬರಿಸಿದೆ. ಮಹಾರಾಷ್ಟ್ರ ಸರ್ಕಾರ ಈಗಾಗಲೇ ಎಲ್ಲಾ ರಾಜ್ಯದ ನಾಗರಿಕರು ಸರಿಯಾಗಿ ಮಾಸ್ಕ್ ಧರಿಸುವಂತೆ ನಿರ್ದೇಶನ ನೀಡಿದೆ.
Bjp Leader Fadnavis Tests Positive For Coronavirus
Follow Us on : Google News | Facebook | Twitter | YouTube