ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿಯಲ್ಲಿ 16 ಡ್ರೋನ್ ವಶ
ಅಂತಾರಾಷ್ಟ್ರೀಯ ಗಡಿಯಲ್ಲಿ ಒಂದು ವಾರದೊಳಗೆ ಬಿಎಸ್ ಎಫ್ 16 ಡ್ರೋನ್ ಗಳನ್ನು ವಶಪಡಿಸಿಕೊಂಡಿದೆ, ಇವರೊಂದಿಗೆ 16 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಂಡೀಗಢ: ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆಗಳು ಸುಮಾರು 16 ಡ್ರೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಒಂದು ವಾರದೊಳಗೆ ಬಿಎಸ್ ಎಫ್ 16 ಡ್ರೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇ
ದರ ಜೊತೆಗೆ 16 ಕೆಜಿ ಮಾದಕ ದ್ರವ್ಯವನ್ನು ಸಹ ಬಿಎಸ್ಎಫ್ ಪಡೆಗಳು ವಶಪಡಿಸಿಕೊಂಡಿವೆ. ಆ ಕಳ್ಳಸಾಗಣೆ ಪ್ರಕರಣದಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ನವೆಂಬರ್ 9 ರಿಂದ 15 ರವರೆಗೆ 16 ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ವಾರದಲ್ಲಿ ಗರಿಷ್ಠ 10 ಡ್ರೋನ್‌ಗಳನ್ನು ವಶಪಡಿಸಿಕೊಳ್ಳಲಾಗುತ್ತಿತ್ತು, ಆದರೆ ಈಗ ಈ ಸಂಖ್ಯೆ ಹೆಚ್ಚಾಗಿದೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಮೃತಸರ, ತರ್ನ್ ತರಣ್ ಮತ್ತು ಗುರುದಾಸ್‌ಪುರ ವಲಯಗಳಲ್ಲಿ ಡ್ರೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವರ್ಷ ಇಲ್ಲಿಯವರೆಗೆ 216 ಡ್ರೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆದರೆ 2023ರಲ್ಲಿ ಒಟ್ಟು 107 ಡ್ರೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪಾಕಿಸ್ತಾನದ ಪ್ರದೇಶದಿಂದ ಹಾರುವ ಡ್ರೋನ್‌ಗಳ ಮೂಲಕ ಮಾದಕ ವಸ್ತುಗಳು, ಶಸ್ತ್ರಾಸ್ತ್ರಗಳು ಮತ್ತು ನಕಲಿ ಕರೆನ್ಸಿಗಳನ್ನು ಸರಬರಾಜು ಮಾಡಲಾಗುತ್ತಿದೆ.
Bsf Seizes 16 Drones In A Week On Punjab Border