ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ ಕಟ್ಟಡವೊಂದು ಆಕಸ್ಮಿಕವಾಗಿ ಕುಸಿದಿದೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಭಾನುವಾರ ಪ್ರಭಾತ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕಟ್ಟಡ ಕುಸಿತ ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ವಿಭಾಗೀಯ ಆಯುಕ್ತರಿಗೆ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಟ್ವೀಟ್ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದರು.
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019