Welcome To Kannada News Today

ಯುಪಿಯಲ್ಲಿ ಬಸ್ ಅಪಘಾತ, ಓರ್ವ ಸಾವು

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಖಾಸಗಿ ಪ್ರಯಾಣಿಕರ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ

🌐 Kannada News :

ಯುಪಿಯಲ್ಲಿ ಬಸ್ ಅಪಘಾತ, ಓರ್ವ ಸಾವು

( Kannada News Today ) : ಮೊರಾದಾಬಾದ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಖಾಸಗಿ ಪ್ರಯಾಣಿಕರ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಮುಂಡಪಾಂಡೆ ಪ್ರದೇಶದಲ್ಲಿ ವೇಗವಾಗಿ ಬಂದ ಲಾರಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಸ್ ಬಿಹಾರದಿಂದ ಪಂಜಾಬ್‌ಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಸ್ಪಿ ಅಮಿತ್ ಕುಮಾರ್ ಆನಂದ್ ತಿಳಿಸಿದ್ದಾರೆ. ರಸ್ತೆ ಅಪಘಾತಕ್ಕೆ ವೇಗವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Web Title : Bus accident in UP One killed, many injured

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.