ಉತ್ತರಾಖಂಡದಲ್ಲಿ ಭೀಕರ ಅಪಘಾತ! ಕಣಿವೆಗೆ ಬಿದ್ದ ಬಸ್, 30 ಮಂದಿ ಸಾವು

Story Highlights

Bus Accident : ಉತ್ತರಾಖಂಡದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದೆ. ಈ ಘಟನೆಯಲ್ಲಿ 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

Bus Accident : ಉತ್ತರಾಖಂಡದಲ್ಲಿ (Uttarakhand) ಭೀಕರ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದೆ (Falls Into Gorge). ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಅಲ್ಮೋರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿ 40 ಮಂದಿ ಪ್ರಯಾಣಿಕರಿದ್ದರು.

ಆಕಸ್ಮಿಕವಾಗಿ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಿದೆ. ಆಕಸ್ಮಿಕವಾಗಿ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದರಕ್ಕೆ ಬಿದ್ದಿದೆ. ಈ ಘಟನೆಯಲ್ಲಿ 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇತರ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಜಿಲ್ಲಾಡಳಿತ ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಬಸ್ಸಿನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಮತ್ತೊಂದೆಡೆ, ಈ ಘಟನೆಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದಾರೆ. ಅಪಘಾತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ.

Bus With Over 30 Passengers Falls Into Gorge In Uttarakhand

Related Stories