Video : ಬೈಕ್‌ಗಳಿಗೆ ಡಿಕ್ಕಿ ಹೊಡೆದ ಐಷಾರಾಮಿ ಕಾರು, ಭಯಾನಕ ದೃಶ್ಯಗಳು ವೈರಲ್ ವಿಡಿಯೋ

Car mows down bikers in Jodhpur : ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಐಷಾರಾಮಿ ಕಾರೊಂದು ಅವಘಡ ಉಂಟು ಮಾಡಿದೆ. ಜೋಧ್‌ಪುರದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ, ಕಾರು ಹಲವಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. (Viral Video)

ಜೈಪುರ (Accident in Jodhpur):  ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಐಷಾರಾಮಿ ಕಾರೊಂದು ಅವಘಡ ಉಂಟು ಮಾಡಿದೆ. ಜೋಧ್‌ಪುರದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ, ಕಾರು ಹಲವಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಕಾರು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಕೊನೆಗೆ ರಸ್ತೆ ಬದಿಯ ಅಂಗಡಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಜೋಧ್‌ಪುರದ ಮಧುರದಾಸ್ ಮಾಥುರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಘಟನೆಯ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ಈ ವೀಡಿಯೊಗಳು (Viral Video) ಪ್ರಸ್ತುತ ಸಾಮಾಜಿಕಜಾಲತಾಣದಲ್ಲಿ ಹರಿದಾಡುತ್ತಿವೆ. ಘಟನೆಯ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಷಾದ ವ್ಯಕ್ತಪಡಿಸಿದ್ದಾರೆ.

ಗಾಯಾಳುಗಳನ್ನು ಸಮಾಲೋಚಿಸಲು ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಏಮ್ಸ್‌ಗೆ ತೆರಳಿದರು. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, 16 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ಸಿಎಂ ತಿಳಿಸಿದ್ದಾರೆ.

ಮೃತರಿಗೆ ಸಿಎಂ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ಅಪಘಾತವು ದುರಂತವಾಗಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಭರವಸೆ ನೀಡಿದರು.

Stay updated with us for all News in Kannada at Facebook | Twitter
Scroll Down To More News Today