ಚಳಿಗೆ ಮನೆ ಮುಂದೆ ಬೆಂಕಿ ಕಾಯಿಸುತ್ತಿದ್ದವರ ಮೇಲೆ ಕಾರು ಹರಿದು ಇಬ್ಬರು ಸಾವು

ಮಧ್ಯಪ್ರದೇಶದ ಮೊರೇನಾ ಜಿಲ್ಲೆಯಲ್ಲಿ ಚಳಿಗೆ ಬೆಂಕಿ ಕಾಯಿಸುತ್ತಿದ್ದವರ ಮೇಲೆ ಕಾರು ಹರಿದು ಅಪ್ರಾಪ್ತ ಬಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

  • ಚಳಿಗೆ ಬೆಂಕಿ ಕಾಯಿಸುತ್ತಿದ್ದವರ ಮೇಲೆ ಕಾರು
  • ಅಪ್ರಾಪ್ತ ಬಾಲಕ ಸೇರಿ ಇಬ್ಬರ ಸಾವು
  • ಮೊರೇನಾ ಜಿಲ್ಲೆಯಲ್ಲಿ ಭಾರೀ ದುರ್ಘಟನೆ

Car Rams into Villagers: ಚಳಿಗಾಲದ ತೀವ್ರತೆಯಿಂದ ತಪ್ಪಿಸಿಕೊಳ್ಳಲು ಮನೆಯ ಮುಂದೇ ಬೆಂಕಿ ಕಾಯಿಸುತ್ತಾ ಕುಳಿತಿದ್ದ ಗ್ರಾಮಸ್ಥರ ಮೇಲೆ ಅತಿವೇಗದಲ್ಲಿ ಬಂದ ಕಾರು ಹರಿದ ಘಟನೆ ಮಧ್ಯಪ್ರದೇಶದಲ್ಲಿ ಭಾರೀ ಆಘಾತ ಮೂಡಿಸಿದೆ.

ಈ ಅಪಘಾತದಲ್ಲಿ 10 ವರ್ಷದ ಬಾಲಕ ಹಾಗೂ 65 ವರ್ಷದ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ದುರ್ಘಟನೆ ಮೊರೇನಾ ಜಿಲ್ಲೆಯ ಪೋರ್ಸಾ–ಜೋಟಾಯಿ ರಸ್ತೆ ಬೈಪಾಸ್‌ ಸಂಧಿಯಲ್ಲಿ ಶನಿವಾರ ಸಂಭವಿಸಿದೆ. ಅಪಘಾತದ ವೇಳೆ ಕಾರು ನಿಯಂತ್ರಣ ತಪ್ಪಿ ನೇರವಾಗಿ ಗ್ರಾಮಸ್ಥರ ಗುಂಪಿನ ಮೇಲೆ ನುಗ್ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ, ಡ್ಯಾಶ್‌ಕ್ಯಾಮ್‌ ತೆರೆದಿಟ್ಟ ಭೀಕರ ಸತ್ಯ

ಗ್ರಾಮಸ್ಥರ ಆಕ್ರೋಶ, ಆರೋಪಿಯ ಪಲಾಯನ

ಸ್ಥಳೀಯರ ಪ್ರಕಾರ, ಅಪಘಾತ ಸಂಭವಿಸಿದ ವೇಳೆ ಕಾರನ್ನು ಪೋರ್ಸಾ ಪ್ರದೇಶದ ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ದೀಪೇಂದ್ರ ಭದೌರಿಯಾ ಚಾಲನೆ ಮಾಡುತ್ತಿದ್ದನು ಎನ್ನಲಾಗಿದೆ. ಘಟನೆ ನಡೆದ ಕೂಡಲೇ ಆಕ್ರೋಶಗೊಂಡ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆದರೆ, ಕೆಲವೇ ನಿಮಿಷಗಳಲ್ಲಿ ಆತ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಆರು ವರ್ಷದ ಮಗಳ ಹತ್ಯೆ, ಹೆತ್ತ ತಾಯಿಯಿಂದಲೇ ನಡೆದ ಕ್ರೂರ ಕೃತ್ಯ

ಈ ಬೆಳವಣಿಗೆಯಿಂದ ಕೋಪಗೊಂಡ ಗ್ರಾಮಸ್ಥರು ಸುಮಾರು 20 ನಿಮಿಷಗಳ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories