India News

ಮೂರು ಅಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

  • ಮೊಹಾಲಿಯಲ್ಲಿ ಕಟ್ಟಡ ಕುಸಿದು 20 ವರ್ಷದ ಯುವತಿ ದುರಂತ ಸಾವು.
  • ಭೂಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳಿಂದ ಪರಿಹಾರ ಕಾರ್ಯಾಚರಣೆ.
  • ಕಟ್ಟಡ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭ

ಚಂಡೀಗಢ (Chandigarh): ಪಂಜಾಬ್‌ನ ಮೊಹಾಲಿಯಲ್ಲಿ ಕಟ್ಟಡ ಕುಸಿತದ ಘಟನೆಯಲ್ಲಿ ಪರಿಹಾರ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಘಟನೆಯಲ್ಲಿ 20 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಆಕೆಯನ್ನು ಹಿಮಾಚಲ ಪ್ರದೇಶದ ದೃಷ್ಟಿ ವರ್ಮಾ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಮೊಹಾಲಿ ಜಿಲ್ಲೆಯಲ್ಲಿ (Building Collapse in Mohali) ಕಟ್ಟಡದ ನೆಲಮಾಳಿಗೆಯನ್ನು ಅಗೆಯುತ್ತಿದ್ದಾಗ, ಪಕ್ಕದ ಮೂರು ಅಂತಸ್ತಿನ ಕಟ್ಟಡವು ಶನಿವಾರ ಸಂಜೆ ಕುಸಿದಿದೆ. ಭೂಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಹಾರ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಮೂರು ಅಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Rescue operations continue in Mohali after a three-story building collapse claimed the life of a 20-year-old woman. Several others have been rescued

ಪುರಿ ಜಗನ್ನಾಥ ದೇವಾಲಯದಲ್ಲಿ ದರ್ಶನಕ್ಕೆ ಹೊಸ ವ್ಯವಸ್ಥೆ, ಜನವರಿ 1ರಿಂದ ಜಾರಿ

ಇಂದು ಬೆಳಿಗ್ಗೆ ಯುವತಿಯ ಮೃತದೇಹ ಪತ್ತೆಯಾಗಿದ್ದು, ಹತ್ತು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು. ಈಗಾಗಲೇ ಹಲವರನ್ನು ರಕ್ಷಿಸಲಾಗಿದ್ದು, ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ, ಪರಿಹಾರ ಕಾರ್ಯಗಳು ಇನ್ನೂ ನಡೆಯುತ್ತಿವೆ. ಕುಸಿದ ಕಟ್ಟಡದಲ್ಲಿ ಜಿಮ್ ಕೂಡ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಏತನ್ಮಧ್ಯೆ, ಪೊಲೀಸರು ಕಟ್ಟಡ ಮಾಲೀಕರಾದ ಪರ್ವಿಂದರ್ ಸಿಂಗ್ ಮತ್ತು ಗಗನ್‌ದೀಪ್ ಸಿಂಗ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 105 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Chandigarh Rescue Operations Continue After Building Collapse in Mohali

English Summary

Related Stories