ರಾಜಕೀಯಕ್ಕೆ ಗುಲಾಂ ನಬಿ ಆಜಾದ್ ವಿದಾಯ?
ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಸಿಡಬ್ಲ್ಯುಸಿ ಸದಸ್ಯ ಗುಲಾಂ ನಬಿ ಆಜಾದ್ ಇನ್ನೇನು ಕೆಲವೇ ದಿನಗಳಲ್ಲಿ ರಾಜಕೀಯಕ್ಕೆ ಗುಡ್ ಬೈ ಹೇಳಲಿದ್ದಾರಾ? ಸಮಾಜ ಸೇವೆಗೆ ಸೀಮಿತರಾಗುವರೇ? ಎಂಬ ಅನುಮಾನಗಳು ಹೆಚ್ಚಾಗುತ್ತಿವೆ.
ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಸಿಡಬ್ಲ್ಯುಸಿ ಸದಸ್ಯ ಗುಲಾಂ ನಬಿ ಆಜಾದ್ ಇನ್ನೇನು ಕೆಲವೇ ದಿನಗಳಲ್ಲಿ ರಾಜಕೀಯಕ್ಕೆ ಗುಡ್ ಬೈ ಹೇಳಲಿದ್ದಾರಾ? ಸಮಾಜ ಸೇವೆಗೆ ಸೀಮಿತರಾಗುವರೇ? ಎಂಬ ಅನುಮಾನಗಳು ಹೆಚ್ಚಾಗುತ್ತಿವೆ.
ಇನ್ನು ಕೆಲವೇ ದಿನಗಳಲ್ಲಿ ಆಜಾದ್ ರಾಜಕೀಯಕ್ಕೆ ಗುಡ್ ಬೈ ಹೇಳಿ ಸಾಮಾಜಿಕ ಅಜೆಂಡಾಗಳಿಗೆ ಸೀಮಿತರಾಗಲಿದ್ದಾರೆ ಎಂಬ ಬೆಳವಣಿಗೆ ಕಾಣುತ್ತಿದೆ. ಇದನ್ನೇ ಅವರು ಪರೋಕ್ಷವಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಆಜಾದ್ ಅವರು ಈ ಸಂದರ್ಭದಲ್ಲಿ ಕೆಲವು ಪ್ರಮುಖ ಹೇಳಿಕೆಗಳನ್ನು ನೀಡಿದರು. ನಾನು ರಾಜಕೀಯಕ್ಕೆ ವಿದಾಯ ಹೇಳಿ ಸಮಾಜಸೇವೆಯಲ್ಲಿ ತೊಡಗಿದ್ದೇನೆ ಎಂದು ಅಚಾನಕ್ಕಾಗಿ ತಿಳಿದರೆ.. ಆಶ್ಚರ್ಯಪಡಬೇಕಿಲ್ಲ ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಇದುವರೆಗೂ ಜಮ್ಮುವಿನಲ್ಲಿ ನಡೆದಿರುವ ಎಲ್ಲಾ ಘಟನೆಗಳಿಗೆ ಪಾಕಿಸ್ತಾನಿ ಉಗ್ರರು ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಪಾಕಿಸ್ತಾನಿ ಉಗ್ರಗಾಮಿಗಳಿಂದಾಗಿ ಹಿಂದೂಗಳು, ಕಾಶ್ಮೀರಿ ಪಂಡಿತರು ಮತ್ತು ಕಾಶ್ಮೀರಿ ಮುಸ್ಲಿಮರು ಎಲ್ಲಾ ವರ್ಗದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದರು. ರಾಜಕೀಯ ಪಕ್ಷಗಳು ಜಾತಿ, ಧರ್ಮ ಸೇರಿದಂತೆ ಇತರೆ ವಿಚಾರಗಳಲ್ಲಿ ಸಮಾಜವನ್ನು ಒಡೆಯಲು ಸದಾ ಯತ್ನಿಸುತ್ತಿವೆ ಎಂದರು.
Follow Us on : Google News | Facebook | Twitter | YouTube