ಪ್ರಧಾನಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವರು ಹಾಗೂ ವಿರೋಧ ಪಕ್ಷಗಳ ನಾಯಕರು ಪ್ರಧಾನಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ನಲ್ಲಿ “ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು” ಎಂದು ಪೋಸ್ಟ್ ಮಾಡಿದ್ದಾರೆ.
Congress Leader Rahul Gandhi Wishes PM Modi on His Birthday
ಇದನ್ನೂ ಓದಿ : ವೆಬ್ ಸ್ಟೋರೀಸ್
Follow us On
Google News |