Amit Shah: ಸಿಪಿಎಂ ಜೊತೆ ಕೈಜೋಡಿಸಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು; ಕೇಂದ್ರ ಸಚಿವ ಅಮಿತ್ ಶಾ

ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಏಕೆಂದರೆ ಸಿಪಿಐ(ಎಂ) ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ಕೊಂದ ಪಕ್ಷವಾಗಿದೆ.

Amit Shah: ತ್ರಿಪುರಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿಪಿಐ(ಎಂ) ಜೊತೆ ಕೈಜೋಡಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ. ತ್ರಿಪುರಾದಲ್ಲಿ ಇದೇ ತಿಂಗಳ 16ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ಚಂಡೀಪುರದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು. ”ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಏಕೆಂದರೆ ಸಿಪಿಐ(ಎಂ) ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ಕೊಂದ ಪಕ್ಷವಾಗಿದೆ. ಅಂತಹ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಚುನಾವಣೆಯಲ್ಲಿ ಪಕ್ಷ ಸೋಲಲಿದೆ ಎಂದೇ ಅರ್ಥ. ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸುವ ಶಕ್ತಿ ಅವರಿಗಿಲ್ಲ. ಎರಡೂ ಪಕ್ಷಗಳು ಇದುವರೆಗೆ ತ್ರಿಪುರಾಕ್ಕೆ ಏನನ್ನೂ ಮಾಡಿಲ್ಲ. ಬಿಜೆಪಿ ಆಡಳಿತದಲ್ಲಿ ಮಾತ್ರ ತ್ರಿಪುರಾ ಅಭಿವೃದ್ಧಿಯಾಗಿದೆ. ಬಿಜೆಪಿ ಎಲ್ಲರ ಕಲ್ಯಾಣಕ್ಕಾಗಿ ಕೆಲಸ ಮಾಡಿದೆ. ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳೂ ಆದಿವಾಸಿಗಳಿಗೆ ಏನನ್ನೂ ಮಾಡಿಲ್ಲ.

ಆದರೆ, ಅವರ ಮತಕ್ಕಾಗಿ ಆದಿವಾಸಿಯನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರು,” ಎಂದು ಅಮಿತ್ ಶಾ ಟೀಕಿಸಿದರು. 60 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ತ್ರಿಪುರಾದಲ್ಲಿ ಇದೇ ತಿಂಗಳ 16ರಂದು ಚುನಾವಣೆ ನಡೆಯಲಿದೆ. ಸದ್ಯ ಅಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮಾಣಿಕ್ ಸಹಾ ಸಿಎಂ ಆಗಿ ಮುಂದುವರಿದಿದ್ದಾರೆ. ಬಿಜೆಪಿ ಈ ಬಾರಿಯೂ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಇದಕ್ಕಾಗಿ ವ್ಯಾಪಕ ಪ್ರಚಾರ ನಡೆಸಲಾಗುತ್ತಿದೆ. ಪ್ರಧಾನಿ ಮೋದಿ ಈಗಾಗಲೇ ಅಲ್ಲಿ ಎರಡು ರ್ಯಾಲಿ ನಡೆಸಿದ್ದಾರೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭೇಟಿ ನೀಡುತ್ತಿದ್ದಾರೆ.

Congress Must Feel Ashamed For Aligning With Cpim Amit Shah In Chandipur

Congress Must Feel Ashamed For Aligning With Cpim Amit Shah In Chandipur

Related Stories