ನ್ಯಾಷನಲ್ ಹೆರಾಲ್ಡ್ ಪ್ರಕರಣ: ಪ್ರಿಯಾಂಕಾ ಗಾಂಧಿ, ರಾಹುಲ್ ಭೇಟಿ ಮಾಡಿದ ಹಿರಿಯ ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೀಘ್ರದಲ್ಲೇ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ತೆರಳಲಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೀಘ್ರದಲ್ಲೇ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ತೆರಳಲಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಕಾಂಗ್ರೆಸ್ ನ ಹಿರಿಯ ನಾಯಕರು ರಾಹುಲ್ ಗೆ ಒಗ್ಗಟ್ಟು ಪ್ರದರ್ಶಿಸಲು ದೆಹಲಿಗೆ ತೆರಳುತ್ತಿದ್ದಾರೆ. ರಾಹುಲ್ ಮನೆಗೆ ಕಾಂಗ್ರೆಸ್ ನಾಯಕಿ ಹಾಗೂ ಸಹೋದರಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದರು. ಅವರ ಜೊತೆ ಸ್ವಲ್ಪ ಹೊತ್ತು ಮಾತನಾಡಿದರು.
ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಗೆ ಹಿರಿಯ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ದೇಶದ ವಿವಿಧ ಭಾಗಗಳಿಂದ ಪಕ್ಷದ ಮುಖಂಡರು ಇಲ್ಲಿಗೆ ಆಗಮಿಸಿ ತಮ್ಮ ಪಕ್ಷದ ನಾಯಕತ್ವಕ್ಕೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಹೇಳಿದ್ದಾರೆ.
ಇದನ್ನೂ ಓದಿ: Rahul Gandhi Appears Before Ed: ನ್ಯಾಷನಲ್ ಹೆರಾಲ್ಡ್ ಕೇಸ್, ಇಂದು ಇಡಿ ಮುಂದೆ ರಾಹುಲ್ ಗಾಂಧಿ ಹಾಜರು
ಕೇಂದ್ರ ಸರಕಾರ ಇಡಿಯನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬುದನ್ನು ದೇಶ ಜನತೆಗೆ ತಿಳಿಸಲಿದೆ ಎಂದರು. ಎಲ್ಲಾ ಪ್ರಕರಣಗಳು ಬೋಗಸ್ ಎಂದು ಆರೋಪಿಸಿದರು. ಈ ಹಿಂದೆ ಹಲವು ಬಾರಿ ಇಡಿಯಿಂದ ನೋಟಿಸ್‌ಗಳು ಬಂದಿದ್ದವು ಎಂದೂ ಅವರು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ರಾಹುಲ್ ಜೊತೆಗೆ ಇಡಿ ಕಚೇರಿಗೆ ರ್ಯಾಲಿ ನಡೆಸಲಿದ್ದಾರೆ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ಬ್ರಿಟಿಷರು ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ ಎಂದರು. ರಾಜಸ್ಥಾನ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ಅಶೋಕ್ ಗಹ್ಲೋಟ್ ಅವರು ಶಾಂತಿಯುತವಾಗಿ ರ್ಯಾಲಿಯಲ್ಲಿ ಭಾಗವಹಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
Congress Senior Leaders Meet Rahul Gandhi
Follow us On
Google News |