ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಬೆಳಗ್ಗೆ 11 ಗಂಟೆಗೆ ಆರಂಭ
ದೇಶದ 16ನೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ
ದೇಶದ 16ನೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ. ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಸಂಸತ್ ಭವನದಲ್ಲಿ ಬೆಳಗ್ಗೆ 11 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸಂಸದರ ಮತಗಳನ್ನು ಮೊದಲು ಎಣಿಸಲಾಗುತ್ತದೆ. ಬಳಿಕ ರಾಜ್ಯವಾರು ಶಾಸಕರ ಮತ ಎಣಿಕೆ ನಡೆಯಲಿದೆ.
ಪ್ರತಿ ರಾಜ್ಯದ ಶಾಸಕರ ಮತಗಳನ್ನು ಇಂಗ್ಲಿಷ್ ವರ್ಣಮಾಲೆಯ ಕ್ರಮದಲ್ಲಿ ಎಣಿಸಲಾಗುತ್ತದೆ. ಎಲ್ಲ ಮತಗಳ ಎಣಿಕೆಯ ನಂತರ ಅಂತಿಮ ಫಲಿತಾಂಶ ಪ್ರಕಟವಾಗಲಿದೆ. ಸಂಜೆ 4 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ಇದೇ 18ರಂದು ಮತದಾನ ನಡೆದಿರುವುದು ಗೊತ್ತೇ ಇದೆ.
ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದಾರೆ. ಇದೇ ವೇಳೆ ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಇದೇ 24ಕ್ಕೆ ಕೊನೆಗೊಳ್ಳಲಿದೆ. ಸಂಪ್ರದಾಯದಂತೆ ಇದೇ 25ರಂದು ನೂತನ ರಾಷ್ಟ್ರಾಧ್ಯಕ್ಷರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
counting of votes for presidential election starts at 11 am
WhatsApp ನಲ್ಲಿ ರಿಯಾಕ್ಷನ್ಸ್ ಫೀಚರ್
Follow us On
Google News |
Advertisement