ಪ್ರಧಾನಿ ಮೋದಿ ಉದ್ಘಾಟಿಸಿದ ನಾಲ್ಕೇ ದಿನದಲ್ಲಿ ಹಾಳಾದ ರಸ್ತೆ !

ಇದೇ ತಿಂಗಳ 16ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಲ್ಲಿ ಹಲವೆಡೆ ಗುಂಡಿಗಳು ಸೃಷ್ಟಿಯಾಗಿವೆ

ಲಖನೌ: ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಗೊಂದಲ ಸೃಷ್ಟಿಯಾಗಿದೆ. ಇದೇ ತಿಂಗಳ 16ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಲ್ಲಿ ಹಲವೆಡೆ ಗುಂಡಿಗಳು ಸೃಷ್ಟಿಯಾಗಿವೆ. ಬುಧವಾರ ಸುರಿದ ಮಳೆಗೆ ಹಲವೆಡೆ ರಸ್ತೆ ಹಾಳಾಗಿದೆ.

ಸೇಲಂಪುರ ಬಳಿಯ ಚಿರಿಯಾದಲ್ಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಗುಂಡಿಗಳು ಉಂಟಾಗಿವೆ. ಇದರ ಪರಿಣಾಮ ಬುಧವಾರ ರಾತ್ರಿ ಎರಡು ಕಾರುಗಳು ಹಾಗೂ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದೆ. ಅಜಿತ್ಮಾಲ್‌ನಲ್ಲೂ ರಸ್ತೆ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಏತನ್ಮಧ್ಯೆ, ಮಧ್ಯಪ್ರದೇಶದ ಚಿತ್ರಕೂಟ ಜಿಲ್ಲೆಯ ಭರತ್‌ಕೂಪ್ ಮತ್ತು ಉತ್ತರ ಪ್ರದೇಶದ ಇಟಾವಾದಲ್ಲಿನ ಕುದುರೆಲ್‌ಗೆ ಸಂಪರ್ಕ ಕಲ್ಪಿಸುವ 296 ಕಿಲೋಮೀಟರ್ ನಾಲ್ಕು ಪಥದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಿರ್ಮಿಸಲಾಗಿದೆ. ಇದು ಮಧ್ಯಪ್ರದೇಶದ ಆರು ಜಿಲ್ಲೆಗಳು ಮತ್ತು ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ.

ಪ್ರಧಾನಿ ಮೋದಿ ಉದ್ಘಾಟಿಸಿದ ನಾಲ್ಕೇ ದಿನದಲ್ಲಿ ಹಾಳಾದ ರಸ್ತೆ ! - Kannada News

8 ಸಾವಿರ ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಆರು ಲೈನ್ ಗಳಿಗೆ ವಿಸ್ತರಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಪ್ರಧಾನಿ ಮೋದಿ ಆರಂಭಿಸಿ ನಾಲ್ಕು ದಿನ ದಿನಕ್ಕೆ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯಲ್ಲಿ ಹಲವೆಡೆ ರಸ್ತೆ ಹಾಳಾಗಿರುವ ಬಗ್ಗೆ ಟೀಕೆ ವ್ಯಕ್ತವಾಗಿದೆ.

days after inauguration by pm parts of ups bundelkhand expressway damaged in rain

Follow us On

FaceBook Google News

Advertisement

ಪ್ರಧಾನಿ ಮೋದಿ ಉದ್ಘಾಟಿಸಿದ ನಾಲ್ಕೇ ದಿನದಲ್ಲಿ ಹಾಳಾದ ರಸ್ತೆ ! - Kannada News

Read More News Today