ಗುಜರಾತ್ ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ, ಲಾರಿಗೆ ಬಸ್ ಡಿಕ್ಕಿ, ಆರು ಮಂದಿ ಸಾವು
ಗುಜರಾತ್ ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಖಾಸಗಿ ಬಸ್, ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಗುಜರಾತ್ (Gujarat) ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ (Road Accident) ನಡೆದಿದೆ. ಭಾವನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್, ಡಂಪರ್ ಟ್ರಕ್‌ಗೆ ಡಿಕ್ಕಿ (Bus Collides with Dumper Truck) ಹೊಡೆದಿದೆ. ಈ ಘಟನೆಯಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.
ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಟ್ರಾಪಾಜ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭಾವನಗರದಿಂದ (Bhavnagar) ಮಹುವ ಕಡೆಗೆ ಹೋಗುತ್ತಿದ್ದ ಬಸ್ ಹಿಂದಿನಿಂದ ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದರೆ, ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Deadly Road Accident in Gujarat: Private Bus Collides with Dumper Truck, Six Dead