ಭೀಕರ ಅಪಘಾತ, ಕರ್ನಾಟಕದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವು
ಮಾನ್ಪುರದ ಭೈರವ ಘಾಟ್‌ನಲ್ಲಿ ಟೆಂಪೋ ಟ್ರಾವೆಲರ್ ಲಾರಿಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ.
- ಟೆಂಪೋ ಟ್ರಾವೆಲರ್ ಲಾರಿಗೆ ಡಿಕ್ಕಿಯಾಗಿ ಅಪಘಾತ
- ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಜನರು ಗಾಯಗೊಂಡಿದ್ದಾರೆ
- ಮೃತಪಟ್ಟವರಲ್ಲಿ ಇಬ್ಬರು ಕರ್ನಾಟಕ ಮೂಲದ ಮಹಿಳೆಯರು
ಮಧ್ಯಪ್ರದೇಶದ ಮಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಭೈರವ ಘಾಟ್‌ನಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ ಒಂದು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಪ್ರಯಾಣಿಕರು ಕರ್ನಾಟಕ ಮೂಲದವರಾಗಿದ್ದು, ಗಾಯಗೊಂಡ 10 ಮಂದಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಅಪಘಾತದ ವೇಳೆ, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಒಂದು ಬೈಕ್ ಕೂಡ ಟೆಂಪೋ ಟ್ರಾವೆಲರ್‌ಗೆ ಡಿಕ್ಕಿಯಾಗಿ ತೀವ್ರ ಹಾನಿಗೊಳಗಾಯಿತು. ಇದರಿಂದಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸವಾರರು ಕೂಡ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಚಿನ್ನ ವಶ
ಘಟನಾ ಸ್ಥಳಕ್ಕೆ ಮಾನ್ಪುರ ಪೊಲೀಸರು ತಕ್ಷಣ ಧಾವಿಸಿ, ಅಪಘಾತದ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಗಾಯಾಳುಗಳು ಇಂದೋರ್‌ನ ಎಂವೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Deadly Road Accident in Madhya Pradesh – 4 Dead, 10 Injured
Our Whatsapp Channel is Live Now 👇