Indian Social Forum : ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಮಂಗಳೂರು ಮೂಲದ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ನೆರವು

Indian Social Forum : ಆಸ್ಪತ್ರೆಯಲ್ಲಿರುವ ಮೃತದೇಹದ ಅಂತ್ಯಕ್ರಿಯೆ ನೆರವೇರಿಸುವ ಹಿನ್ನೆಲೆಯಲ್ಲಿ ಮೃತರ ಸಂಬಂಧಿಕರು ಇಂಡಿಯನ್ ಸೋಶಿಯಲ್ ಫೋರಂನ ಸದಸ್ಯರನ್ನು ನೆರವಿಗಾಗಿ ಸಂಪರ್ಕಿಸಿದ್ದರು.

Online News Today Team

Indian Social Forum – ರಿಯಾದ್: ಸೌದಿ ಅರೇಬಿಯಾದ ರಿಯಾದ್ ನಲ್ಲಿ ಸುಮಾರು 27 ವರ್ಷಗಳಿಂದ ಹೌಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ನಿವಾಸಿಯಾದಂತಹ ಕುಡುಮನ್ ಹಮೀದ್ ಚೇರಿಯಬ್ಬ (55 ವರ್ಷ) ಎಂಬವರು ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದು ಇಂಡಿಯನ್ ಸೋಶಿಯಲ್ ಫೋರಂನ ಸಹಕಾರದಿಂದ ದಫನ ಪ್ರಕ್ರಿಯೆ ನಡೆಸಲಾಯಿತು.

ಆಸ್ಪತ್ರೆಯಲ್ಲಿರುವ ಮೃತದೇಹದ ಅಂತ್ಯಕ್ರಿಯೆ ನೆರವೇರಿಸುವ ಹಿನ್ನೆಲೆಯಲ್ಲಿ ಮೃತರ ಸಂಬಂಧಿಕರು ಇಂಡಿಯನ್ ಸೋಶಿಯಲ್ ಫೋರಂನ ಸದಸ್ಯರನ್ನು ನೆರವಿಗಾಗಿ ಸಂಪರ್ಕಿಸಿದ್ದರು.

ಇಂಡಿಯನ್ ಸೋಶಿಯಲ್ ಫೋರಂನ ನಿಝಾಮ್ ಬಜ್ಪೆ ಮತ್ತು ನಿಸಾರ್ ವಳವೂರು ನೇತೃತ್ವದ ತಂಡವು ತಕ್ಷಣವೇ ಸ್ಪಂದಿಸಿ ಸೌದಿ ಅರೇಬಿಯಾದ ಕಾನೂನಿನಂತೆ ಸ್ಥಳೀಯ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಕುಡುಮನ್ ಹಮೀದ್ ಚೇರಿಯಬ್ಬರ ಮರಣವು ಸಹಜ ಮರಣವೆಂದು ದೃಢೀಕರಣ ಪತ್ರ ಪಡೆಯಲಾಯಿತು.

ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಮಂಗಳೂರು ಮೂಲದ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ನೆರವುಬಳಿಕ ಮೃತದೇಹವನ್ನು ಪಡೆಯಲು ರಿಯಾದಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು  ಊರಿನಲ್ಲಿರುವ ಮೃತರ ಸಂಬಂಧಿಗಳನ್ನು ಸಂಪರ್ಕಿಸಿ ಮುಹಮ್ಮದ್ ಇರ್ಷಾದ್ ಹಸನಬ್ಬರವರ ಹೆಸರಿನಲ್ಲಿ ಅಧಿಕಾರ ಪತ್ರವನ್ನು ಭಾರತೀಯ ರಾಯಭಾರ ಕಚೇರಿಯ ಮೂಲಕ ಪಡೆದು, ಅಂತಿಮವಾಗಿ ಮೃತದೇಹವನ್ನು ಆಸ್ಪತ್ರೆಯಿಂದ ಪಡೆಯಲಾಯಿತು.

ದಿನಾಂಕ 03-04-2022 ನೇ ಆದಿತ್ಯವಾರದಂದು ರಿಯಾದಿನ ಅಲ್ ರಾಜಿ಼ ಮಸೀದಿಯಲ್ಲಿ ಮಯ್ಯತ್ ನ ಅಂತಿಮ ವಿಧಿ ವಿಧಾನವನ್ನು ನಿರ್ವಹಿಸಿ, ನಸೀಮ್ ದಫನಭೂಮಿಯಲ್ಲಿ ಇಂಡಿಯನ್ ಸೋಶಿಯಲ್ ಫೋರಂನ ಸದಸ್ಯರು ಮತ್ತು ಮೃತರ ಆಪ್ತರ ಸಮ್ಮುಖದಲ್ಲಿ ಮಯ್ಯತ್ ನಮಾಜ್ ಮಾಡಿ ದಫನ ಕಾರ್ಯ ನಿರ್ವಹಿಸಲಾಯಿತು.

ಇವರ ಅಕಾಲಿಕ ಮರಣಕ್ಕೆ ಇಂಡಿಯನ್ ಸೋಶಿಯಲ್ ಫೋರಂನ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿಯು ಸಂತಾಪ ಸೂಚಿಸಿದೆ.

ಇಂಡಿಯನ್ ಸೋಶಿಯಲ್ ಫೋರಂನ ಈ ಸತ್ಕಾರ್ಯಕ್ಕೆ ಮೃತರ ಸಂಬಂಧಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

Follow Us on : Google News | Facebook | Twitter | YouTube