ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 71ಕ್ಕೆ ಏರಿಕೆ
ಅಸ್ಸಾಂನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಹಲವೆಡೆ ಭೂಕುಸಿತ ಸಂಭವಿಸಿದೆ
ಗುವಾಹಟಿ : ಅಸ್ಸಾಂನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಹಲವೆಡೆ ಭೂಕುಸಿತ ಸಂಭವಿಸಿದೆ. ಮತ್ತು ಪ್ರಮುಖ ನದಿಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
33 ಜಿಲ್ಲೆಗಳಲ್ಲಿ ಒಟ್ಟು 42 ಲಕ್ಷ ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ಪ್ರವಾಹದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದೇ ವೇಳೆ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಪ್ರವಾಹದಿಂದ ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನಲ್ಲಿ ಪ್ರವಾಹಕ್ಕೆ ಇದುವರೆಗೆ 71 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
Death toll rises to 71 in Assam floods
Follow Us on : Google News | Facebook | Twitter | YouTube