ದೆಹಲಿ ಕೆಫೆಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಅರೆಸ್ಟ್

ದೆಹಲಿಯ ಪ್ರೀತ್ ವಿಹಾರ್‌ನಲ್ಲಿರುವ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ಯುವತಿಯ ಮೇಲೆ ಸಹೋದ್ಯೋಗಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ (Delhi) ಪೂರ್ವ ಭಾಗದ ಪ್ರೀತ್ ವಿಹಾರ್ ಪ್ರದೇಶದಲ್ಲಿರುವ ಸಲ್ತಾನಾತೆ ಕೆಫೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ಯುವತಿಯೇ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವ ಆರೋಪವಿದ್ದು, ಈ ಪೈಕಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ.

ಸೋಮವಾರ ರಾತ್ರಿ ಕೆಫೆಯಲ್ಲಿ ಸಹೋದ್ಯೋಗಿಗಳಿಗಾಗಿ ಪಾರ್ಟಿ ಆಯೋಜಿಸಲಾಗಿತ್ತು. ಯುವತಿಯೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಳು. ರಾತ್ರಿ ಸುಮಾರು 11.30ಕ್ಕೆ ಕೆಫೆ ಮುಚ್ಚಿದ ಬಳಿಕವೂ ಅಲ್ಲಿದ್ದವರು ಮನೆಗೆ ತೆರಳಿರಲಿಲ್ಲ. ಕೆಫೆಯ ಬೀಗದ ಕೀಲಿ ಒಬ್ಬರ ಬಳಿ ಇದ್ದ ಕಾರಣ ಮತ್ತೆ ಬಾಗಿಲು ತೆರೆದು ಒಳಗೆ ಉಳಿದಿದ್ದರು. ಬಳಿಕ ತಡರಾತ್ರಿಯವರೆಗೂ ಮದ್ಯ ಸೇವನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಮಯದಲ್ಲಿ ಇಬ್ಬರು ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಅಲ್ಲಿದ್ದ ಇತರರು ಕೂಡ ಈ ಕೃತ್ಯಕ್ಕೆ ಸಹಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಯುವತಿಯ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈವರೆಗೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದ ಮೂವರು ಆರೋಪಿಗಳು ಪತ್ತೆಯಾಗಿಲ್ಲ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories