ಅಜಯ್ ಮಿಶ್ರಾ ಜೊತೆ ವೇದಿಕೆ ಹಂಚಿಕೊಳ್ಳಬೇಡಿ, ಮೋದಿಗೆ ಪ್ರಿಯಾಂಕಾ ಪತ್ರ

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರೊಂದಿಗೆ ವೇದಿಕೆ ಹಂಚಿಕೊಳ್ಳಬೇಡಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದಾರೆ. ಈ ಸಂಬಂಧ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. 

ನವದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರೊಂದಿಗೆ ವೇದಿಕೆ ಹಂಚಿಕೊಳ್ಳಬೇಡಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದಾರೆ. ಈ ಸಂಬಂಧ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವರ ಉದ್ದೇಶ ( ಕೃಷಿ ಕಾನೂನು ರದ್ದುಗೊಳಿಸುವ ನಿರ್ಧಾರ) ಪಾರದರ್ಶಕವಾಗಿದ್ದರೆ ಪ್ರಧಾನಮಂತ್ರಿ ಅವರು ವೇದಿಕೆ ಹಂಚಿಕೊಳ್ಳಬಾರದು ಮತ್ತು ಸಚಿವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಡಿಜಿಪಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಶನಿವಾರ ಲಖನೌಗೆ ಬಂದಿದ್ದರು. ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಬಂಧನದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರನ್ನು ಸ್ಥಾನದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ಒತ್ತಾಯಿಸುತ್ತಿದೆ.

ವಿಷಯದಲ್ಲಿ ನಿಮ್ಮ ಉದ್ದೇಶ ಸ್ಪಷ್ಟವಾಗಿದ್ದರೆ, ಗೃಹ ಸಚಿವ ಅಜಯ್ ಮಿಶ್ರಾ ಅವರೊಂದಿಗೆ ಒಂದೇ ವೇದಿಕೆಯನ್ನು ಹಂಚಿಕೊಳ್ಳಬೇಡಿ…ಎಂದು ಪಾತ್ರದಲ್ಲಿ ಉಲ್ಲೇಖಿಸಿದ್ದಾರೆ. ಆ ಪತ್ರದಲ್ಲಿ ಪ್ರಿಯಾಂಕಾ ಅವರನ್ನು ವಜಾಗೊಳಿಸುವಂತೆ ಕೇಳಿಕೊಂಡಿದ್ದಾರೆ.

ತಮ್ಮ ಸರ್ಕಾರವು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಶುಕ್ರವಾರ ಪ್ರಧಾನಿ ಘೋಷಿಸಿದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಅವರ ಪತ್ರವು ಮಹತ್ವ ಪಡೆದುಕೊಂಡಿದೆ.

ಅಕ್ಟೋಬರ್ 3ರಂದು ಲಖಿಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದರು. ಸಾವಿಗೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಸೇರಿದಂತೆ 13 ಜನರನ್ನು ಬಂಧಿಸಲಾಗಿದೆ.

ಅಜಯ್ ಮಿಶ್ರಾ ಅವರ ವಾಹನ ನಾಲ್ವರು ರೈತರ ಮೇಲೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ನಂತರದ ಹಿಂಸಾಚಾರದಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದರು. ಲಖಿಂಪುರ ಹಿಂಸಾಚಾರದ ತನಿಖೆಯ ಮೇಲ್ವಿಚಾರಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ರಾಕೇಶ್ ಕುಮಾರ್ ಜೈನ್ ಅವರನ್ನು ಸುಪ್ರೀಂ ಕೋರ್ಟ್ ನೇಮಿಸಿದೆ.

Stay updated with us for all News in Kannada at Facebook | Twitter
Scroll Down To More News Today