ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ! ಚಾಲಕ ಸಜೀವ ದಹನ
Car Explodes : ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಕಾರಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿಯಲ್ಲಿ ಕಾರಿನ ಚಾಲಕ ಸಜೀವ ದಹನವಾಗಿದ್ದಾನೆ.

- ಕಾರಿಗೆ ಹಠಾತ್ ಬೆಂಕಿ, ಬಳಿಕ ಸಿಲಿಂಡರ್ ಸ್ಫೋಟ
- ಚಾಲಕ ಕಾರಿನಿಂದ ತಪ್ಪಿಸಿಕೊಳ್ಳಲಾಗದೆ ಸಜೀವ ದಹನ
- ಸ್ಫೋಟದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್
Car Explodes : ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ (car fire) ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಾರಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.
ಘಟನೆಯಲ್ಲಿ ಕಾರಿನ ಚಾಲಕ ಸಜೀವ ದಹನವಾಗಿದ್ದಾನೆ.. ಇದನ್ನು ನೋಡಿ ಅಲ್ಲಿದ್ದ ಜನರು ಬೆಚ್ಚಿಬಿದ್ದರು. ಈ ಘಟನೆ ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ನಡೆದಿದೆ.
ಕದ್ಮಾ ಪ್ರದೇಶದಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಚಾಲಕ ಕಾರನ್ನು ರಸ್ತೆಯಲ್ಲೇ ನಿಲ್ಲಿಸಿದ. ಈ ವೇಳೆ ಕಾರಿನ ಡಿಕ್ಕಿಯಲ್ಲಿದ್ದ ಗ್ಯಾಸ್ ಸಿಲಿಂಡರ್ (gas cylinder) ಸ್ಫೋಟಗೊಂಡಿದೆ. ಬೆಂಕಿಯಲ್ಲಿ ಕಾರು ಸುಟ್ಟು ಭಸ್ಮವಾಯಿತು. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಜೀವಂತವಾಗಿ ಸುಟ್ಟುಹೋದನು. ಈ ಘಟನೆಯನ್ನು ನೋಡಿ ಅಲ್ಲಿದ್ದ ಜನರು ಆಘಾತಕ್ಕೊಳಗಾದರು.
ಏತನ್ಮಧ್ಯೆ, ಘಟನೆಯ ಬಗ್ಗೆ ತಿಳಿದ ತಕ್ಷಣ ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ತಲುಪಿತು. ಮೃತ ವ್ಯಕ್ತಿಯನ್ನು ಸುನಿಲ್ ಅಗರ್ವಾಲ್ ಎಂದು ಗುರುತಿಸಲಾಗಿದೆ. ಕಾರು ಸ್ಫೋಟ ಘಟನೆಯ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಏತನ್ಮಧ್ಯೆ, ಘಟನೆಯ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
Driver Burnt Alive in Jharkhand Car Blast



