ದ್ರೌಪದಿ ಮುರ್ಮು ಭಾರತದ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಸ್ರೆಂಟಲ್ ಹಾಲ್‌ನಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್ ಒಂಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಮತ್ತು ದ್ರೌಪತಿ ಮುರ್ಮು ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ದ್ರೌಪದಿ ಮುರ್ಮು ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ಭವನ ತಲುಪಿದರು. ಅವರು ಸಾಂಪ್ರದಾಯಿಕ ಮೆರವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಸಂಸತ್ತಿನ ಸೆಂಟ್ರಲ್ ಹಾಲ್ ತಲುಪಿದರು. ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂವಿಧಾನದ 60 ನೇ ವಿಧಿ ಪ್ರಕಾರ ಅವರಿಗೆ ಪ್ರಮಾಣ ವಚನ ಬೋಧಿಸಿದರು. ತಕ್ಷಣವೇ ಸೇನೆಯು 21 ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ನೂತನ ರಾಷ್ಟ್ರಪತಿಗೆ ಗೌರವ ವಂದನೆ ಸಲ್ಲಿಸಿತು.

Droupadi Murmu takes oath as India’s 15th president

ದ್ರೌಪದಿ ಮುರ್ಮು ಭಾರತದ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು - Kannada News

Follow us On

FaceBook Google News

Advertisement

ದ್ರೌಪದಿ ಮುರ್ಮು ಭಾರತದ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು - Kannada News

Read More News Today