ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಲಾರಿ ಹರಿದು ಮೂವರು ಸಾವು
ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಡಂಪರ್ ಲಾರಿ ಹರಿದಿದೆ. ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
- ಪುಣೆಯಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಲಾರಿ ಹರಿದು ದುರಂತ
- ಮದ್ಯದ ಅಮಲಿನಲ್ಲಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಮೂವರು ಸಾವು
- ಫುಟ್‌ಪಾತ್‌ನಲ್ಲಿ 12 ಜನರು ಮಲಗಿದ್ದರು, ಸೋಮವಾರ ಮುಂಜಾನೆ ಘಟನೆ
ಮುಂಬೈ (Mumabi): ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಡಂಪರ್ ಲಾರಿಯೊಂದು (dumper truck) ಹರಿದಿದ್ದು, ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮದ್ಯದ ಅಮಲಿನಲ್ಲಿ ಡಂಪರ್ ಲಾರಿ ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಫುಟ್‌ಪಾತ್‌ನಲ್ಲಿ (sleeping on a footpath) 12 ಜನರು ಮಲಗಿದ್ದರು, ಸೋಮವಾರ ಮುಂಜಾನೆ ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಡಂಪರ್ ಲಾರಿ ಅವರ ಮೇಲೆ ಹರಿಸಿದ್ದಾನೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಮೃತರನ್ನು 22 ವರ್ಷದ ವಿಶಾಲ್ ವಿನೋದ್ ಪವಾರ್, ಒಂದು ವರ್ಷದ ವೈಭವ್ ರಿತೇಶ್ ಪವಾರ್ ಮತ್ತು ಎರಡು ವರ್ಷದ ವೈಭವ್ ರಿತೇಶ್ ಪವಾರ್ ಎಂದು ಗುರುತಿಸಲಾಗಿದೆ.
Drunk Driver Runs Over Footpath Dwellers in Pune, Three Dead