ಮುಂಬೈ: ಏರ್ ಇಂಡಿಯಾಗೆ ಸೇರಿದ ಬೋಯಿಂಗ್ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿರುವುದು ಬೆಳಕಿಗೆ ಬಂದಿದೆ. ದುಬೈನಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾದ ಬಿ787 ವಿಮಾನದಲ್ಲಿ (flight number 934) ತಾಂತ್ರಿಕ ಸಮಸ್ಯೆ ಉಂಟಾಗಿದೆ. ಇದರಿಂದಾಗಿ ವಿಮಾನವನ್ನು ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಸಮಸ್ಯೆಯಿಂದಾಗಿ ವಿಮಾನವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಬ್ಬರು ಹಿರಿಯ ಅಧಿಕಾರಿಗಳು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ಹಲವು ವಿಮಾನಗಳು ಇತ್ತೀಚೆಗೆ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಆಕಾಶದಲ್ಲಿರುವಾಗ ತಾಂತ್ರಿಕ ಸಮಸ್ಯೆಗಳು ಬರುತ್ತಿವೆ. ಅದನ್ನು ಹತ್ತಿರದ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗುತ್ತಿದೆ. ಇತ್ತೀಚಿಗೆ ಇದೆ ರೀತಿಯ ಘಟನೆಗಳು ಮರುಕಳಿಸುತ್ತಿವೆ.
dubai to kochi air india plane emergency landing in mumbai
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019