ಮುಂಬೈ ರೈಲು ನಿಲ್ದಾಣದಲ್ಲಿ ಭಾರೀ ನೂಕುನುಗ್ಗಲು! ಕಾಲ್ತುಳಿತಕ್ಕೆ 9 ಮಂದಿ ಗಂಭೀರ ಗಾಯ
ಮುಂಬೈನ ಬಾಂದ್ರಾ ಟರ್ಮಿನಸ್ ನಲ್ಲಿ ಭಾರೀ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Stampede : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ರೈಲು ನಿಲ್ದಾಣಗಳತ್ತ ಮುಗಿ ಬೀಳುತ್ತಿದ್ದಾರೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ರೈಲು ನಿಲ್ದಾಣಗಳು ಕಿಕ್ಕಿರಿದು ತುಂಬಿವೆ.
ಇದರಿಂದಾಗಿ ಇಂದು ಬೆಳಗ್ಗೆ ಮುಂಬೈನ ಬಾಂದ್ರಾ ಟರ್ಮಿನಸ್ ನಲ್ಲಿ ಭಾರೀ ಕಾಲ್ತುಳಿತ (Stampede) ಸಂಭವಿಸಿದೆ. ಈ ಘಟನೆಯಲ್ಲಿ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ಸಂಖ್ಯೆ 1 ರಲ್ಲಿ ನೂರಾರು ಪ್ರಯಾಣಿಕರು ಕಾಯುತ್ತಿರುವಾಗ, ಬಾಂದ್ರಾದಿಂದ ಉತ್ತರ ಪ್ರದೇಶದ ಗೋರಖ್‌ಪುರಕ್ಕೆ 22921 ಸಂಖ್ಯೆಯ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್‌ಗೆ ಬಂದಿತು. ಜನರು ರೈಲು ಹತ್ತಲು ಮುಗಿಬಿದ್ದರು. ಈ ವೇಳೆ ಕಾಲ್ತುಳಿತ ಉಂಟಾಯಿತು.
ಇಂದು ಬೆಳಗ್ಗೆ 5.56ಕ್ಕೆ ಈ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಒಂಬತ್ತು ಪ್ರಯಾಣಿಕರನ್ನು ರೈಲ್ವೆ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಹತ್ತಿರದ ಆಸ್ಪತ್ರೆಗೆ ಸಾಗಿಸಿದರು. ಸದ್ಯ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ ಇಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆಗೆ ಸಂಬಂದಿಸಿದ ವೀಡಿಯೊಗಳು ಮತ್ತು ಗೋರಖ್‌ಪುರ ಎಕ್ಸ್‌ಪ್ರೆಸ್ ಅಲ್ಲಿಗೆ ತಲುಪಿದಾಗ ಕಾಲ್ತುಳಿತದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
Due To Rush On Mumbai Bandra Terminus 9 People Have Been Injured In A Stampede