ಜಮ್ಮು ಮತ್ತು ಕಾಶ್ಮೀರದಲ್ಲಿ 4.3 ತೀವ್ರತೆಯ ಭೂಕಂಪ
ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಲೇಹ್ ಪ್ರದೇಶದಲ್ಲಿ ಇಂದು ಭೂಕಂಪ ಸಂಭವಿಸಿದೆ. ಇಂದು ಬೆಳಗ್ಗೆ 7:29ಕ್ಕೆ ಭೂಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.
ರಿಕ್ಟರ್ ಮಾಪಕದಲ್ಲಿ 4.3 ಅಳತೆಯ ಭೂಕಂಪನವು ಜಮ್ಮು ಮತ್ತು ಕಾಶ್ಮೀರದ ಲೇಹ್ (ಅಲ್ಚಿ) ನ ಉತ್ತರಕ್ಕೆ 186 ಕಿಮೀ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ರಾಷ್ಟ್ರೀಯ ಭೂವೈಜ್ಞಾನಿಕ ಸಮೀಕ್ಷೆಯು ಟ್ವಿಟರ್ನಲ್ಲಿ ಈ ಬಗ್ಗೆ ಹೀಗೆ ಹೇಳಿದೆ: “ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ 7:29 ಕ್ಕೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ಲಡಾಖ್ನ ಲೇಹ್ ಜಿಲ್ಲೆಯ ಅಲ್ಚಿ ಗ್ರಾಮದ ಉತ್ತರಕ್ಕೆ 186 ಕಿಮೀ ದೂರದಲ್ಲಿದೆ.
ಭೂಕಂಪದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅದೇ ರೀತಿ ವಸ್ತು ಹಾನಿಯಾಗಿರುವ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Follow Us on : Google News | Facebook | Twitter | YouTube