India News
ಜಮ್ಮು ಮತ್ತು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಮಧ್ಯಾಹ್ನ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 1.05ಕ್ಕೆ ರಿಕ್ಟರ್ ಮಾಪಕದಲ್ಲಿ 5.2ರಷ್ಟು ಭೂಕಂಪನ ದಾಖಲಾಗಿದೆ. ಭೂಕಂಪನದ ಕೇಂದ್ರ ಬಿಂದು ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿಯಲ್ಲಿ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ಭೂಮಿಯ ಮೇಲ್ಮೈಯಿಂದ 202 ಕಿಲೋಮೀಟರ್ ಆಳದಲ್ಲಿ ವರದಿಯಾಗಿದೆ.
ಆದರೆ, ಏಕಾಏಕಿ ಕಂಪಿಸಿದ ಕಾರಣ ಜನರು ಆತಂಕಗೊಂಡು ಮನೆಗಳಿಂದ ಓಡಿ ಬಂದರು. ಆಸ್ತಿ ಅಥವಾ ಸಾವು ನೋವುಗಳ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರವು ಟೆಕ್ಟೋನಿಕ್ ಪ್ಲೇಟ್‌ನಲ್ಲಿರುತ್ತದೆ ಮತ್ತು ತೀವ್ರ ಒತ್ತಡದಲ್ಲಿ ಭೂಕಂಪಗಳು ಸಂಭವಿಸುತ್ತವೆ ಎಂದು ವಿಜ್ಞಾನಿಗಳು ಹೇಳುತ್ತಾರೆ.
Earthquake Tremors In Jammu And Kashmir