ಕಾಂಗ್ರೆಸ್ ನಾಯಕಿ ಸೋನಿಯಾಗೆ ಇಡಿ ಸಮನ್ಸ್ !
Sonia Gandhi: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸಮನ್ಸ್ ಜಾರಿ ಮಾಡಿದೆ.
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸಮನ್ಸ್ ಜಾರಿ (ED summons ) ಮಾಡಿದೆ. ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇದೇ ತಿಂಗಳ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಆದರೆ, ಈ ಹಿಂದೆ ಪ್ರಕರಣದಲ್ಲಿ ಇಡಿ ಮುಂದೆ ಹಾಜರಾಗಲು ಕೆಲ ದಿನಗಳ ಕಾಲಾವಕಾಶ ಕೋರಿದ್ದರು… ಕೊರೊನಾದಿಂದ ಚೇತರಿಸಿಕೊಂಡ ನಂತರ ಸೋನಿಯಾ ಗಾಂಧಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಆಮೂಲಕ ಕೆಲ ದಿನಗಳಿಂದ ಇಡಿ ಮುಂದೆ ಹಾಜರಾಗಿರಲಿಲ್ಲ, ಆ ವೇಳೆ ಆರೋಗ್ಯದ ದೃಷ್ಟಿಯಿಂದ ಇಡಿ ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತನಿಖಾ ಸಂಸ್ಥೆ 50 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.
ED summons to Congress leader Sonia Gandhi Again
Follow us On
Google News |
Advertisement