Welcome To Kannada News Today

Chandan Mitra: ಹಿರಿಯ ಪತ್ರಕರ್ತ, ಮಾಜಿ ಸಂಸದ ಚಂದನ್ ಮಿತ್ರ ನಿಧನ, ಪ್ರಧಾನಿ ಮೋದಿ ಸಂತಾಪ

65 ವರ್ಷದ ಹಿರಿಯ ಪತ್ರಕರ್ತ ಹಾಗೂ ಮಾಜಿ ಸಂಸದ ಚಂದನ್ ಮಿತ್ರ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬುಧವಾರ ರಾತ್ರಿ ಕೊನೆಯುಸಿರೆಳೆದರು.

🌐 Kannada News :

Editor And Former MP Chandan Mitra: ಹಿರಿಯ ಪತ್ರಕರ್ತ ಹಾಗೂ ಮಾಜಿ ಸಂಸದ ಚಂದನ್ ಮಿತ್ರ (65) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬುಧವಾರ ರಾತ್ರಿ ಕೊನೆಯುಸಿರೆಳೆದರು.

ಚಂದನ್ ಮಿತ್ರ ಅವರ ಪುತ್ರ ಕುಶನ್ ಮಿತ್ರ ಇದನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ. “ನನ್ನ ತಂದೆ ಮಧ್ಯರಾತ್ರಿಯಲ್ಲಿ ನಿಧನರಾದರು. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು “ಎಂದು ಅವರ ಮಗ ಕುಶನ್ ಮಿತ್ರ ಟ್ವೀಟ್ ಮಾಡಿದ್ದಾರೆ.

ಚಂದನ್ ಮಿತ್ರ ಅವರು ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪಯೋನೀರ್ ಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಚಂದನ್ ಮಿತ್ರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. 

ಚಂದನ್ ಮಿತ್ರ, ಒಬ್ಬ ಅಸಾಧಾರಣ ಬುದ್ಧಿವಂತಿಕೆ ಹೊಂದಿರುವ ಸಂಪಾದಕ ಮತ್ತು ರಾಜಕಾರಣಿ, ಮಾಧ್ಯಮ ಮತ್ತು ರಾಜಕೀಯ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

📱 Latest Kannada News ಗಳಿಗಾಗಿ Kannada News Today App ಡೌನ್ ಲೋಡ್ ಮಾಡಿಕೊಳ್ಳಿ.
📣 All Kannada News Now in our Facebook Page.
Contact for web design services Mobile