ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌, ತಪ್ಪಿದ ಬಾರೀ ಅನಾಹುತ

eight coaches of Lokmanya Tilak Express derail near Salagaon - National News

ಕನ್ನಡ ನ್ಯೂಸ್ ಟುಡೇIndia News

ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌, ತಪ್ಪಿದ ಬಾರೀ ಅನಾಹುತ

ಒಡಿಶಾ – ಜನವರಿ 16 : ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ಗುರುವಾರ ಸಲಗಾಂವ್ ಬಳಿ, ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಬೋಗಿಗಳು ಹಳಿ ತಪ್ಪಿ ಹಲವಾರು ಜನರು ಗಾಯಗೊಂಡಿದ್ದಾರೆ. ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ. ಬಾರೀ ಅನಾಹುತ ತಪ್ಪಿದೆ.

ಪೂರ್ವ ಕರಾವಳಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ಪ್ರಕಾರ, ಸಲಗಾಂವ್ ಬಳಿ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು ಹಳಿ ತಪ್ಪಿದ ಪರಿಣಾಮ ಸುಮಾರು 20 ಜನರು ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ 7 ಗಂಟೆಗೆ ಈ ಘಟನೆ ನಡೆದಿದ್ದು, ಈವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

ರೈಲ್ವೆ ಅಧಿಕಾರಿಗಳು ಘಟನೆಗೆ ಮೂಲ ಕಾರಣವನ್ನು ಪರಿಶೀಲಿಸುತ್ತಿದ್ದಾರೆ, ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.////

Quick Links : India News Kannada | National News Kannada