ದೇಶದಲ್ಲಿ 8ಕ್ಕೆ ತಲುಪಿದ ಮಂಕಿಪಾಕ್ಸ್ ಪ್ರಕರಣಗಳು
MonkeyPox : ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಮಂಗಳವಾರ ದೆಹಲಿಗೆ ಆಗಮಿಸಿದ್ದ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ದೃಢಪಟ್ಟಿದೆ.
Monkeypox : ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಮಂಗಳವಾರ ದೆಹಲಿಗೆ ಆಗಮಿಸಿದ್ದ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಮಂಕಿಪಾಕ್ಸ್ ಒಟ್ಟು ಪ್ರಕರಣಗಳ ಸಂಖ್ಯೆ ಎಂಟಕ್ಕೆ ತಲುಪಿದೆ.
ಮಂಕಿಪಾಕ್ಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎಚ್ಚೆತ್ತುಕೊಂಡಿದೆ. ಆರು ಆಸ್ಪತ್ರೆಗಳಲ್ಲಿ 70 ಪ್ರತ್ಯೇಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಕಿಪಾಕ್ಸ್ ಗೆ ಲಸಿಕೆ ಅಭಿವೃದ್ಧಿಪಡಿಸಲು ಸಂಶೋಧನೆ ನಡೆಸಲಾಗುತ್ತಿದೆ ಎಂದು ಸೀರಮ್ ಕಂಪನಿಯ ಸಿಇಒ ಆದರ್ ಪೂನಾವಾಲಾ ತಿಳಿಸಿದ್ದಾರೆ.
ಮಂಕಿಪಾಕ್ಸ್ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದ ನ್ಯೂಯಾರ್ಕ್, ಕ್ಯಾಲಿಫೋರ್ನಿಯಾ ಮತ್ತು ಇಲಿನಾಯ್ಸ್ ನಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ. ಅಮೆರಿಕದಲ್ಲಿ 6,000 ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ ಮತ್ತು ಅವುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಈ ಮೂರು ರಾಜ್ಯಗಳಲ್ಲಿ ವರದಿಯಾಗಿದೆ.
eight monkeypox cases in india
ಸಮಂತಾ ಬಗ್ಗೆ ರಣವೀರ್ ಕಾಮೆಂಟ್ ವೈರಲ್
ಮತ್ತೊಂದು ದಾಖಲೆ ನಿರ್ಮಿಸಿದ 777 ಚಾರ್ಲಿ ಸಿನಿಮಾ
ತೆಲುಗು ಚಿತ್ರರಂಗ ನನಗೆ ಮತ್ತೊಂದು ಮನೆ ಎಂದ ಕಿಚ್ಚ ಸುದೀಪ್
Follow us On
Google News |
Advertisement